ವಿಧಾನಸಭೆ ಚುನಾವಣೆ; ಮಾದರಿ ನೀತಿ ಸಂಹಿತೆ ಉಲ್ಲಂಘನೆರೂ.6 ಲಕ್ಷ ನಗದು, 98.59 ಲೀ. ಮದ್ಯ, 4 ಬೈಕ್ ವಶ: ಡಿಸಿ ಮಾಲಪಾಟಿ ಮಾಹಿತಿ


ಬಳ್ಳಾರಿ,ಮೇ 07- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕಾರ್ಯಾಚರಣೆ ಮುಂದುವರೆದಿದ್ದು, ಶನಿವಾರದಂದು 6 ಲಕ್ಷ ರೂ. ನಗದು ಹಣ ಮತ್ತು 41,598 ರೂ. ಮೌಲ್ಯದ 98.59 ಲೀಟರ್ ಮದ್ಯ ಹಾಗೂ ಸಾಗಾಣಿಕೆಗೆ ಬಳಸಿದ್ದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
 ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮೂವರು ಚುನಾವಣಾ ವೆಚ್ಚ ವೀಕ್ಷಕರು, 51 ಫ್ಲೈಯಿಂಗ್ ಸÁ್ಕ್ವ್ಯಡ್, 27 ಎಸ್‍ಎಸ್‍ಟಿ ತಂಡ ಹಾಗೂ 7 ಅಬಕಾರಿ ತಂಡಗಳು ಕಾರ್ಯಪ್ರವೃತ್ತವಾಗಿ ತಪಾಸಣೆ ನಡೆಸುತ್ತಿವೆ.
ಶನಿವಾರ, ಅಬಕಾರಿ ಇಲಾಖೆಯಿಂದ 41,598 ರೂ. ಮೌಲ್ಯದ 98.58 ಲೀಟರ್ ಮದ್ಯ ವಶಪಡಿಸಿಕೊಂಡಿದ್ದು, ಸಾಗಾಣಿಕೆಗೆ ಬಳಕೆ ಮಾಡಿದ್ದ 4 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
91-ಕಂಪ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುರುಗೋಡಿನಲ್ಲಿ ಎಫ್‍ಎಸ್‍ಟಿ ತಂಡದ ಅಧಿಕಾರಿಗಳು ಸೂಕ್ತ ದಾಖಲೆಗಳಿಲ್ಲದ ರೂ.6 ಲಕ್ಷ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ, ಪರಿಶೀಲನೆಗಾಗಿ ಸಮಿತಿಯ ಮುಂದೆ ಹಾಜರುಪಡಿಸಿದ್ದು, ಚುನಾವಣಾಧಿಕಾರಿಗಳ ಸಮಕ್ಷಮದಲ್ಲಿ ಖಜಾನೆಯಲ್ಲಿರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.