ವಿಧಾನಸಭೆ ಚುನಾವಣೆ, ವ್ಯವಸ್ಥಿತವಾಗಿ ನಡೆಸಲು ಸೂಚನೆ

ಹರಿಹರ.ಮಾ. 30 ; ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ವ್ಯವಸ್ಥಿತವಾಗಿ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಅಧಿಕಾರಿಗಳ ಸಹಕಾರ ಅಗತ್ಯ ಎಂದು ಹರಿಹರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಉದಯಕುಮಾರ್ ಎಸ್ ಕಂಬಾರ ಹೇಳಿದರು. ಮಿನಿವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದವರು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ  2023 ಮೇ 10ರಂದು ನಡೆಲಿರುವ ಚುನಾವಣೆಯನ್ನು  ಅಚ್ಚುಕಟ್ಟಾಗಿ  ಜವಾಬ್ದಾರಿಯುತವಾಗಿ ನಡೆಸಬೇಕು. ಆಯೋಗ ಪ್ರಕಾರ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ನೀತಿ ಸಂಹಿತೆ ಜಾರಿಯಿಂದ ಮತ ಏಣಿಕೆ ಪ್ರಕ್ರಿಯೆ ಮುಕ್ತಾಯಗೊಳ್ಳವರೆಗೂ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು.ಚುನಾವಣಾ ಸಮಯದ ಸಂದರ್ಭದಲ್ಲಿ ಯಾವುದೇ ಪಕ್ಷದ ಮತ್ತು ಧಾರ್ಮಿಕ ಕಾರ್ಯಕ್ರಮ ಸಮಾರಂಭಗಳನಡೆಯುವ ಪೂರ್ವದಲ್ಲಿ ಸಂಬಂಧಿಸಿದ ಚುನಾವಣೆ  ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ ಪರವಾನಿಗೆ ಪಡೆಯಬೇಕೆಂಬುವುದು ಗಮನದಲ್ಲಿಟ್ಟುಕೊಂಡು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂದು ಹೇಳಿದರು.ತಹಶೀಲ್ದಾರ್ ಪೃಥ್ವಿ ಸಾನಿಕಂ ಮಾತನಾಡಿ ಪ್ರಜಾಪ್ರಭುತ್ವ ಕಾಪಾಡುವಲ್ಲಿ ಅಧಿಕಾರಿಗಳ ಪಾತ್ರ ಅಗತ್ಯ. ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲು ಅಧಿಕಾರಗಳು ನಿಷ್ಪಕ್ತವಾಗಿ ಕೆಲಸ ಮಾಡಬೇಕಚುನಾವಣಾ ಅಕ್ರಮಗಳನ್ನು ತಡೆಯಲು ಈಗಿನಿಂದಲೇ ಕಟ್ಟೆಚ್ಚರವಹಿಸಿ, ವ್ಯವಸ್ಥೆಯನ್ನು ಸಜ್ಜುಗೊಳಿಸಿಕೊಳ್ಳಬೇಕು. ರಾಜಕೀಯ ಪಕ್ಷಗಳು ಮತ್ತು ನಾಯಕರಿಂದ ಅಂತರ ಕಾಯ್ದುಕೊಳ್ಳಬೇಕುಚುನಾವಣಾ ಪ್ರಕ್ರಿಯೆಯಲ್ಲಿ ಲೋಪ ಎಸಗುವ ಅಥವಾ ಪಕ್ಷಪಾತ ಮಾಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಅಧಿಕಾರಿಗಳು ಅಂತಹ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಪ್ರಾಮಾಣಿಕ ಕೆಲಸ ಮಾಡಬೇಕು.ಯಾವುದೇ ದೂರು ಬಂದಲ್ಲಿ ಬೆದರಿಕೆ ಕರೆ ಬಂದಲ್ಲಿ ಚುನಾವಣೆ ಆಯೋಗ ಅಥವಾ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತರಬೇಕು.ಅಧಿಕಾರಿಯ ಬಗ್ಗೆ ದೂರು ಬಂದರೆ ಸಹಿಸುವುದಿಲ್ಲ ಎಂದು ಚುನಾವಣೆ ಸ್ಪಷ್ಟವಾಗಿ ತಿಳಿಸಿದೇ. ಮುಕ್ತ, ನ್ಯಾಯಸಮ್ಮತ ಮತ್ತು ನಿರ್ಭೀತವಾಗಿ ಚುನಾವಣೆ ನಡೆಸಲು ಆಯೋಗ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ. ಚುನಾವಣೆ ಅಕ್ರಮಗಳನ್ನು ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

 ನಗರಸಭೆಯ ಪೌರಾಯುಕ್ತ  ಬಸವರಾಜ್ ಐಗೂರ್. ತಾಲೂಕು ಪಂಚಾಯಿತಿ ಕಾರ್ಯನಿರ್ವಣ ಅಧಿಕಾರಿ ರವಿ ಎನ್. ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ. ರಾಜಸ್ವ ನಿರೀಕ್ಷಕರಗಳು ಗ್ರಾಮ ಲೆಕ್ಕಾಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಚುನಾವಣೆ ಶಾಖೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಇದ್ದರು