ವಿಧಾನಸಭೆ ಚುನಾವಣೆ, ವ್ಯವಸ್ಥಿತವಾಗಿ ನಡೆಸಲು ಸೂಚನೆ

ರಾಯಚೂರು, ಮಾ.೧೨- ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ವ್ಯವಸ್ಥಿತವಾಗಿ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಅಧಿಕಾರಿಗಳ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರು ಹೇಳಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಚುನಾವಣೆ ಕಾನೂನು ಅನುಷ್ಠಾನ ಕುರಿತು ಒಂದು ದಿನದ ಕಾರ್ಯಾಗಾರ ಸಭೆ ಉದ್ದೇಶಿಸಿ ಮಾತನಾಡಿದರು.ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಚುನಾವಣೆ ಆಯೋಗ ನಿರ್ದೇಶನದಂತೆ ಪೊಲೀಸ್ ಅಧಿಕಾರಿಗಳು, ಆರ್ ಒ, ಎಆರ್ ಒ, ಎಸ್ ಎಸ್ ಟಿ, ಎಫ್ ಎಸ್ ಟಿ, ಯು ಎಸ್ ಟಿ ತಂಡಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು. ಚುನಾವಣೆ ಸಂದರ್ಭದಲ್ಲಿ ಹಣ ಮತ್ತು ಕುಕ್ಕರ್ ಹಂಚಿಕೆ ಬೆದರಿಕೆ ಕರೆ ಅಥವಾ ಸಾರ್ವಜನಿಕ ದೂರು ಬಂದಲ್ಲಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಬೇಕೆಂದು ಸೂಚನೆ ನೀಡಿದರು.
ಮತದಾರರ ಮೇಲೆ ಪ್ರಭಾವ ಬೀರುವ ಅಥವಾ ಆಮಿಷ ಒಡ್ಡುವ ಯಾವುದೇ ದೂರುಗಳು ಬಂದರೂ ಪ್ರಕರಣ ದಾಖಲಿಸಿ, ಕ್ರಮ ಜರುಗಿಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಕುರೇರ ಮಾತನಾಡುತ್ತಾ, ವಿಧಾನಸಭಾ ಚುನಾವಣೆಯನ್ನು
ಅಚ್ಚುಕಟ್ಟಾಗಿ ಮತ್ತು ಜವಾಬ್ದಾರಿಯುತವಾಗಿ ನಡೆಸಬೇಕು. ಆಯೋಗ ಪ್ರಕಾರ ಕಾನೂನು ಮತ್ತು
ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ನೀತಿ ಸಂಹಿತೆ ಜಾರಿಯಿಂದ
ಮತ ಏಣಿಕೆ ಪ್ರಕ್ರಿಯೆ ಮುಕ್ತಾಯಗೊಳ್ಳವರೆಗೂ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು.
ದೊಡ್ಡ ಮೊತ್ತದ ವಹಿವಾಟು, ಕುಕ್ಕರ್, ಮಿಕ್ಸಿ ಮತ್ತಿತರ ಗೃಹಬಳಕೆ ವಸ್ತುಗಳ ಸಗಟು ಖರೀದಿ ಹಾಗೂ ಸಾಗಣೆ ಮೇಲೆ ನಿಗಾ ಇರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮತದಾರರಿಗೆ ಆಮಿಷ ಒಡ್ಡುವ ಪ್ರಕರಣಗಳು ಕಂಡುಬಂದಲ್ಲಿ, ಸಾರ್ವಜನಿಕವಾಗಿ ಅಥವಾ ದೂರು ಬಂದಲ್ಲಿ ಪ್ರಕರಣ ದಾಖಲಿಸಬೇಕೆಂದು ಸೂಚನೆ ನೀಡಿದರು.
ಪಕ್ಷದ ಕಾರ್ಯಕರ್ತರಲ್ಲಿ ೫೦ ಸಾವಿರ ಕ್ಕಿಂತ ಹೆಚ್ಚು ಹಣ ಕಂಡು ಬಂದಲ್ಲಿ ವಶಕ್ಕೆ ಪಡೆದು ಕ್ರಮ ಕೈಗೊಳ್ಳಬೇಕು ಎಂದರು.
ಚುನಾವಣೆ ಪ್ರಚಾರಕ್ಕೆ ಅನುಮತಿ ಇಲ್ಲದೇ ವಾಹನಗಳ ಕ್ರಮ ಕೈಗೊಳ್ಳಬೇಕು ಎಂದರು.
ಖಾಸಗಿ ವ್ಯಕ್ತಿಗಳ ಮನೆಯಲ್ಲಿ ಅನುಮತಿ ಇಲ್ಲದೇ
ಬ್ಯಾನರ್ ಗಳ ಆಂಟಿಸಿದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು.ಸಾರ್ವಜನಿಕ ಕಾರ್ಯಕ್ರಮ ನಡೆದಿದ್ದಲ್ಲಿ ನಿರ್ಬಂಧ ಏರಬೇಕು ಎಂದರು.
ಚುನಾವಣಾ ಅಕ್ರಮಗಳನ್ನು ತಡೆಯಲು ಈಗಿನಿಂದಲೇ ಕಟ್ಟೆಚ್ಚರವಹಿಸಿ, ವ್ಯವಸ್ಥೆಯನ್ನು ಸಜ್ಜುಗೊಳಿಸಿಕೊಳ್ಳಬೇಕು. ರಾಜಕೀಯ ಪಕ್ಷಗಳು ಮತ್ತು ನಾಯಕರಿಂದ ಅಂತರ ಕಾಯ್ದುಕೊಳ್ಳಬೇಕು ಎಂದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ನಿಖಿಲ್ ಮಾತನಾಡಿ, ಪ್ರಜಾಪ್ರಭುತ್ವ ಕಾಪಾಡುವಲ್ಲಿ ಅಧಿಕಾರಿಗಳ ಪಾತ್ರ ಅಗತ್ಯ. ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲು ಅಧಿಕಾರಗಳು ನಿಷ್ಪಕ್ತವಾಗಿ ಕೆಲಸ ಮಾಡಬೇಕು ಎಂದರು.
ಚುನಾವಣಾ ಪ್ರಕ್ರಿಯೆಯಲ್ಲಿ ಲೋಪ ಎಸಗುವ ಅಥವಾ ಪಕ್ಷಪಾತ ಮಾಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಅಧಿಕಾರಿಗಳು ಅಂತಹ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಪ್ರಾಮಾಣಿಕ ಕೆಲಸ ಮಾಡಬೇಕು.
ಯಾವುದೇ ದೂರು ಬಂದಲ್ಲಿ ಬೆದರಿಕೆ ಕರೆ ಬಂದಲ್ಲಿ ಚುನಾವಣೆ ಆಯೋಗ ಅಥವಾ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತರಬೇಕು.
ಅಧಿಕಾರಿಯ ಬಗ್ಗೆ ದೂರು ಬಂದರೆ ಸಹಿಸುವುದಿಲ್ಲ ಎಂದು ಚುನಾವಣೆ ಸ್ಪಷ್ಟವಾಗಿ ತಿಳಿಸಿದೇ. ಮುಕ್ತ, ನ್ಯಾಯಸಮ್ಮತ ಮತ್ತು ನಿರ್ಭೀತವಾಗಿ ಚುನಾವಣೆ ನಡೆಸಲು ಆಯೋಗ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ. ಚುನಾವಣೆ ಅಕ್ರಮಗಳನ್ನು ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕಾನೂನು ಸಹಾಯಕ ಎ ಆದಿಮನಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.