ವಿಧಾನಸೌಧದಲ್ಲಿನ ಲೂಟಿ ಗ್ಯಾಂಗ್ ಓಡಿಸಲು ಜೆಡಿಎಸ್‍ಗೆ ಅಧಿಕಾರ ಕೊಡಿ

ಆಳಂದ:ಜ.10: ಜನಪರ ಕಾಳಜಿ ಇಲ್ಲದ ಲೂಟಿಗ್ಯಾಂಗ್‍ನವರು ವಿಧಾನಸೌಧದಲ್ಲಿ ಸೇರಿಕೊಂಡಿದ್ದಾರೆ. ಅವರನ್ನು ಓಡಿಸುವ ಕೆಲಸ ಮಾಡಬೇಕಿದೆ. ಹಾಗಾಗಿ, ಪ್ರಾದೇಶಿಕ ಪಕ್ಷ ಜೆಡಿಎಸ್‍ಗೆ ಒಂದು ಅವಕಾಶ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ತಾಲೂಕಿನ ಗಡಿಗ್ರಾಮ ಖಜೂರಿಗೆ ಸೋಮವಾರ ಆಗಮಿಸಿದ್ದ ಜೆಡಿಎಸ್ ಹಮ್ಮಿಕೊಂಡ ಪಂಚರತ್ನ ರಥಯಾತ್ರೆಗೆ ನೀಡಿದ್ದ ಅದ್ಧೂರಿ ಸ್ವಾಗತ ಸ್ವೀಕರಿಸಿ ಅವರು ಮಾತನಾಡಿದರು.

ವಿಧಾನಸೌಧನಲ್ಲಿ ಸೇರಿ ಬಿಜೆಪಿಗರು ಲೂಟಿ ಹೊಡೆಯುತ್ತಿದ್ದಾರೆ. ಪ್ರಗತಿ ಕೃಷ್ಣಾ ಬ್ಯಾಂಕ್‍ನ ಭ್ರಷ್ಟಾರವು ಈ ಭಾಗದಲ್ಲೂ ವ್ಯಾಪಿಸಿದೆ, ಇದನ್ನು ಶೀಘ್ರವೇ ಬಹಿರಂಗ ಪಡಿಸಲಾಗುವುದು ಎಂದು ಹೇಳಿದರು.

ಬೆಂಗಳೂರು ನಗರ ಅಷ್ಟೇಯಲ್ಲ ಇಡೀ ರಾಜ್ಯವೇ ವಿಶ್ವ ಮಟ್ಟಕ್ಕೆ ಹಾಳು ಮಾಡಿದ್ದಾರೆ. ಅದನ್ನು ಸರಿ ಮಾಡಲು ನಮಗೆ ಅಧಿಕಾರ ನೀಡಿ, ಕ್ಷೇತ್ರದಲ್ಲಿನ ಪಕ್ಷದ ಅಭ್ಯರ್ಥಿ ಮಹೇಶ್ವರಿ ವಾಲಿ ಅವರನ್ನು ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿಕೊಡಿ ಎಂದು ಜನತೆಯನ್ನು ಕೈ ಮುಗಿದು ಬೇಡಿಕೊಂಡರು.

ಮಾಜಿ ಪ್ರಧಾನಿ ತಮ್ಮ ಇಳಿವಯಸ್ಸಿನಲ್ಲೂ ರಾಜ್ಯವೆಲ್ಲ ಸುತ್ತಾಡಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಬಡವರಿಗೆ ನೆರವಾಗಬೇಕೆಂಬ ಹಂಬಲದಿಂದ ದೇವೇಗೌಡರು ಪಕ್ಷಕ್ಕೆ ಮತ್ತು ಜನತೆಗೆ ಸ್ಪೂರ್ತಿ ನೀಡುತ್ತಿದ್ದದಾರೆ ಎಂದರು. ರಾಜ್ಯದ ರೈತರ, ಕಾರ್ಮಿಕರು ಬಡವರ ದೀನ ದರ್ಬಲರ ಸಮಸ್ಯೆ ಪರಿಹಾರ ತರಲು ಜೆಡಿಎಸ್ ಅಧಿಕಾರಕ್ಕೆ ಬರಬೇಕಿದೆ. ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಮತಗಳನ್ನು ನೀಡಿ ಆಶೀರ್ವದಿಸಸಬೇಕು ಎಂದು ಕೋರಿದ ಅವರು, ನಾಡಿನ ಆರೂವರೆ ಕೋಟಿ ಜನರ ಆಶೀರ್ವಾದದೊಂದಿಗೆ ಅಧಿಕಾರಕ್ಕೆ ಬರಬೇಕೆಂಬುದು ನಮ್ಮ ಅಪೇಕ್ಷೆ. ಅದರಂತೆ ಪಂಚರತ್ನ ರಥಯಾತ್ರೆ ರೂಪಿಸಿದ್ದೆವು. ಇದಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ಅಭಿವೃದ್ಧಿಗಿಂತ ತೆರಿಗೆ ಹಣ ಲೂಟಿ ಮಾಡಿದ್ದರ ಬಗ್ಗೆ ಜನ ಚರ್ಚೆ ಮಾಡ್ತಿದ್ದಾರೆ ಎಂದು ರಾಷ್ಟ್ರೀಯ ಪಕ್ಷಿಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಮತೊಮ್ಮೆ ಅಧಿಕಾರ ನೀಡಿ: ನಾನು ಹದಿನಾಲ್ಕು ತಿಂಗಳು ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮಾಡಲು ಅವಕಾಶ ಸಿಗಲಿಲ್ಲ. ಭ್ರಷ್ಟಾರಹಿತ ಸರ್ಕಾರ ಕೊಡುವ ಹೋರಾಟ ನಡೆಸಿದ್ದೇವೆ. ನಾವು ಅಧಿಕಾರದಲ್ಲಿ ಇದ್ದಾಗ ಅನೇಕ ಅಭಿವೃದ್ಧಿ ಕಾರ್ಯಕ್ರಮ ಕೊಟ್ಟಿದ್ದೇವೆ. ದೇವೇಗೌಡರು ಸಿಎಂ ಆಗಿದ್ಧಾಗ ಬೆಂಗಳೂರಿಗೆ ಫ್ಲೈ ಓವರ್ ಕೊಟ್ಟಿದ್ದಾರೆ. ಕಾವೇರಿ ನದಿ ನೀರು ಪಡೆಯಲು ಕೇಂದ್ರ ಸರ್ಕಾರದ ಮುಂದೆ ಅರ್ಜಿ ಹಾಕಿದ್ದೆವು. ಆದರೆ, ತಮಿಳುನಾಡಿಗೆ ಮಣಿದು ಕೇಂದ್ರದಲ್ಲಿ ಇದ್ದ ಕಾಂಗ್ರೆಸ್ ಸರ್ಕಾರ ಇದಕ್ಕೆ ಒಪ್ಪಲಿಲ್ಲ. ಆದರೆ, ದೇವೇಗೌಡರು ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗ ಬೆಂಗಳೂರಿಗೆ ಕುಡಿಯುವ ನೀರು ಕೊಟ್ಟರು. ರಾಜ್ಯಕ್ಕೆ ಗೌಡರು ಅನೇಕ ಯೋಜನೆ ನೀಡಿದರೆ ಮತ್ತೊಂಡಡೆ ಬಿಜೆಪಿ ಕಾಂಗ್ರೆಸ್ ಬಿಜೆಪಿ ನಿರುದ್ಯೋಗ, ಜಾತಿ ವೈಮನಸ್ಯನ್ನು ತರುತ್ತಿದ್ದಾರೆ. ಇದರಿಂದ ನೀವು ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲ. ನೀವು ಕೊಟ್ಟ ಹಣದಿಂದ ನಿಮಗೆ ಆ ಹಣ ಕೊಟ್ಟು ವೋಟ್ ಪಡೆದು ಅಧಿಕಾರಕ್ಕೆ ಬರುತ್ರೆ.ತಾ ಕೂಲಿ ಕಾರ್ಮಿಕರಿಗೆ ಮನೆ ಇಲ್ಲ ಎಂದು ಕಿಡಿಕಾರಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ಒಂದು ಬಡವರ ವರ್ಗ ಮತ್ತು ಶ್ರೀಮಂತರ ವರ್ಗ ಇದೆ ಎಂದು ಭಾರತ್ ಜೋಡೋ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. 45 ವರ್ಷ ಆಳ್ವಿಕೆ ಮಾಡಿದವರು ಎಲ್ಲರನ್ನು ಒಂದೇ ರೀತಿ ನೋಡಿದ್ದೀರಾ?. ಈಗ ಎರಡು ವರ್ಗಗಳು ನೆನಪಿಗೆ ಬಂದಿದೆ ಎಂದು ವಾಗ್ದಾಳಿ ನಡೆಸಿದರು.

ಎರಡು ರಾಷ್ಟ್ರೀಯ ಪಕ್ಷಗಳ ಭ್ರಷ್ಟಾಚಾರದ ಬಗ್ಗೆ ಈಗ ಚರ್ಚೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರು ಬಿಜೆಪಿಯ ಶೇ 40ರಷ್ಟು ಕಮಿಷನ್ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಇಂಧನ ಇಲಾಖೆ ಭ್ರಷ್ಟಾಚಾರ ಬಗ್ಗೆ ಈಗ ತನಿಖೆ ಮಾಡುತ್ತೇವೆ ಎಂದು ಬಿಜೆಪಿ ಸರ್ಕಾರ ಹೇಳುತ್ತಿದೆ. ಈ ಹಿಂದೆಯೇ ನಾನು ಸದನದಲ್ಲಿ ಮಾತನಾಡಿದ್ದೆ. ರಾಜ್ಯವನ್ನು ಲೂಟಿ ಮಾಡುವ ಪಕ್ಷಕ್ಕೆ ಇನ್ನು ಎಷ್ಟು ದಿನ ಆಶೀರ್ವಾದ ಕೊಡುತ್ತೀರಾ? ಎಂದು ಪ್ರಶ್ನೆ ಮಾಡಿದ ಹೆಚ್ ಡಿಕೆ, ತೆಲಂಗಾಣದಲ್ಲಿ ರೈತರ ಹೊಲಕ್ಕೆ 24 ಗಂಟೆ ಉಚಿತ ವಿದ್ಯುತ್ ಕೊಡುತ್ರೆ. ಆದರೆ ಇಲ್ಲಿ 7 ಗಂಟೆ ಕೊಡುತ್ತೇವೆ ಎಂದು ಹೇಳುತ್ತೀರಾ, 3 ಗಂಟೆಗೆ ಮಾತ್ರ ಸೀಮಿತವಾಗಿದೆ. ಇದು ಬಿಜೆಪಿ ಸರ್ಕಾರ ನೀಡುತ್ತಿರುವ ಆಳ್ವಿಕೆ ಎಂದು ಕಿಡಿಕಾರಿದರು.