ವಿಧಾನಸೌಧದಲ್ಲಿ ಬಸವೇಶ್ವರರ ಪ್ರತಿಮೆ ಸ್ಥಾಪಿಸಲು ಮನವಿ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಸೆ.21: ನಾಡಿನ ಶಕ್ತಿಕೇಂದ್ರವಾದ ವಿಧಾನಸೌಧದಲ್ಲಿ ಶ್ರೀ ಬಸವೇಶ್ವರರ ಪ್ರತಿಮೆಯನ್ನು ಸ್ಥಾಪಿಸುವಂತೆ ವಿಶ್ವಲಿಂಗಾಯತ ಮಹಾಜನ ಪರಿಷತ್ತು ಮನವಿ ಮಾಡಿದೆ.
ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು 12ನೇ ಶತಮಾನದಲ್ಲಿ ಸಮಾಜದ ಸಮಾನತೆಗಾಗಿ ಸಮರ ಸಾರಿದ ವಿಶ್ವಗುರು ಶ್ರೀಜಗಜ್ಯೋತಿ ಬಸವೇಶ್ವರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸುವಂತೆ ವಿನಂತಿಸಿಕೊಂಡಿದ್ದಾರೆ.
ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಶ್ರೀನಿವಾಸ ಪಾಟೇಲ್, ಉಪಾಧ್ಯಕ್ಷ ದೊಡ್ಡಬಸವನಗೌಡ, ಪ್ರಧಾನ ಕಾರ್ಯದರ್ಶಿ ಸಂತೋಷ್ ಅಗಡಿ, ಕಾರ್ಯದರ್ಶಿ ನಾಗಭೂಷಣ್, ಮತ್ತಿತರರು ಉಪಸ್ಥಿತರಿದ್ದರು.