ವಿಧಾನ ಪರಿಷತ್ತಿಗೆ ಮಹಾಂತಪ್ಪ ಸಂಗಾವಿ ಆಯ್ಕೆಗೆ ಒತ್ತಾಯ

ಕಲಬುರಗಿ:ಜೂ.2: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಕೆಪಿಸಿಸಿ ಸದಸ್ಯರಾದ ಮಹಾಂತಪ್ಪ ಕೆ ಸಂಗಾವಿ ಅವರಿಗೆ ರಾಜ್ಯ ವಿಧಾನ ಪರಿಷತ್ತಿಗೆ ಆಯ್ಕೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗ ಸಾಮಾಜಿಕ ಜಾಲತಾಣ ಉಸ್ತುವಾರಿ ಮಹೇಶಕುಮಾರ ತೆಲ್ಲೂರಕರ್ ಅವರು ಕಾಂಗ್ರೆಸ್ ಹೈಕಮಾಂಡ್‍ಗೆ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸುಮಾರು ವರ್ಷಗಳಿಂದ ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿಭಾಯಸಿದ್ದಾರೆ ಪಕ್ಷದ ಸಂಘಟನೆಗೆ ಹಗಲಿರುಳು ಶ್ರಮಿಸಿದ್ದಾರೆ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ 8 ವರ್ಷದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಪಕ್ಷಕ್ಕೆ ನೀಡಿರುವ ಕೊಡುಗೆ ಪರಿಗಣಿಸಿ ಸಂಗಾವಿ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಮಾಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತೆಲ್ಲೂರಕರ್ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ. ಪ್ರಮುಖರಾದ ಬಸವರಾಜ ಬಿರಾದಾರ, ಸಿದ್ದಾರೂಢ ದಿಕ್ಕಂಗಿ, ಶಿವಕುಮಾರ ಚಿಂಚೋಳ್ಳಿ, ಕರಣ ಬಂದರವಾಡ, ಅರುಣಕುಮಾರ ಇನಾಮದಾರ ಇದ್ದರು.