ವಿಧಾನ ಪರಿಷತ್ ಚುನಾವಣೆ: ಎನ್.ಎಸ್ ಬೋಸರಾಜು ನಾಮಪತ್ರ ಸಲ್ಲಿಕೆ

ರಾಯಚೂರು,ಜೂ.೨೧-
ಕರ್ನಾಟಕದಲ್ಲಿ ಜೂನ್ ೩೦ರಂದು ನಡೆಯಲಿರುವ ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್ ಬೋಸರಾಜು ಅವರು ಬೆಂಗಳೂರಿನಲ್ಲಿ ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಬಿಜೆಪಿ ನಾಯಕರು ರಾಜೀನಾಮೆ ನೀಡಿದ ನಂತರ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು.
ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿ ಸುಧೀರ್ಘವಾಗಿ ೫೩ ವರ್ಷಗಳ ಕಾಲ ಪಕ್ಷಕ್ಕಾಗಿ ಸೇವೆ ಸಲ್ಲಿಸಿದನ್ನು ಪರಿಗಣಿಸಿ ಎನ್.ಎಸ್ ಬೋಸುರಾಜು ಅವರಿಗೆ ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸ್ಥಾನ ನೀಡಿದೆ.
ದಿ.೩೦ ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಸಚಿವ ಎನ್.ಎಸ್ ಬೋಸರಾಜು ಸೇರಿ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಾಮಕನೂರು ಅವರಿಗೆ ಟಿಕೆಟ್ ನೀಡಿದೆ.