ವಿಧಾನ ಪರಿಷತ್ ಚುನಾವಣೆ: ಜಿಲ್ಲಾ ದೂರು ನಿರ್ವಹಣಾ ಘಟಕ ಸ್ಥಾಪನೆ

ಕಲಬುರಗಿ,ನ.15:ಕರ್ನಾಟಕ ವಿಧಾನ ಪರಿಷತ್ (ಸ್ಥಳೀಯ ಸಂಸ್ಥೆ) ಚುನಾವಣೆ-2021 ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ಜಿಲ್ಲಾ ದೂರು ನಿರ್ವಹಣಾ ಘಟಕವನ್ನು ಸ್ಥಾಪಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ವಿ.ವಿ.ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.
ಕಲಬುರಗಿ ಮಿನಿ ವಿಧಾನಸೌಧದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯಲ್ಲಿರುವ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಚೇರಿ ಕೊಠಡಿ ಸಂಖ್ಯೆ-11ರಲ್ಲಿ ದೂರು ನಿರ್ವಹಣಾ ಘಟಕವನ್ನು ಕಾರ್ಯನಿರ್ವಹಿಸಲಿದೆ. ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ದೂರವಾಣಿ ಸಂಖ್ಯೆ 08472-278604 ಹಾಗೂ 278677 ಗಳಿಗೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.