ವಿಧಾನ ಪರಿಷತ್ ಸದಸ್ಯರಾಗಿ ಎಂ.ಆರ್. ಸೀತಾರಾಮ್ ನೇಮಕ

ಚಿಕ್ಕಬಳ್ಳಾಪುರ,ಆ.೨೨-ರಾಜ್ಯದ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಶಿಕ್ಷಣ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ತಮ್ಮನ್ನು ದಶಕಗಳ ಕಾಲದಿಂದ ತೊಡಗಿಸಿಕೊಂಡಿರುವ ಹಿರಿಯ ರಾಜಕಾರಣಿ ಎಮ್.ಆರ್. ಸೀತಾರಾಮ್ ರವರನ್ನು ರಾಜ್ಯ ಸರ್ಕಾರ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಿರುವುದು ಅತ್ಯಂತ ಶ್ರೇಷ್ಠ ನಿರ್ಧಾರವಾಗಿದೆ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಮುಖಂಡ ಮಂಡಿಕಲ್ ಉಪೇಂದ್ರ ರವರು ತಿಳಿಸಿದರು.
ಎಂ ಆರ್ ಸೀತಾರಾಮ್ ರವರು ಎಂ.ಎಲ್.ಸಿ. ಆಗಿ ನೇಮಕಗೊಂಡ ಕಾರಣ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣ ಬಡ ಹಾಗೂ ಮಧ್ಯಮ ವರ್ಗದ ಜನತೆಗೂ ಸಹ ಸಿಗಲು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.
ಎಂ .ಆರ್ .ಸೀತಾರಾಮರವರು ಈ ಹಿಂದೆ ಸಿದ್ದರಾಮಯ್ಯರವರ ಸಚಿವ ಸಂಪುಟದಲ್ಲಿ ಸಚಿವರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದರು ಇವರು ಬಲಿಜ ಜನಾಂಗದ ಹಿತ ಸಂರಕ್ಷಣೆಗಾಗಿಯೂ ಸಹ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ ಮುಂದಿನ ದಿನಗಳಲ್ಲಿ ಅವರ ಸೇವೆ ಈ ಕ್ಷೇತ್ರಕ್ಕೆ ಲಭಿಸುವಂಥಾಗಲಿ ಎಂದರು.
ಇದೇ ಸಂದರ್ಭದಲ್ಲಿ ಎಂ ಆರ್ ಸೀತಾರಾಮ್ ರವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿಕೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಮಕೃಷ್ಣ ಒಳಗೊಂಡಂತೆ ಮತ್ತಿತರರು ಹಾಜರಿದ್ದರು.