ವಿಧಾನ ಸಭೆಯಲ್ಲಿ ಸಿಡಿ ಕೋಲಾಹಲ ಕಲಾಪ ನಾಳೆಗೆ ಮುಂದೂಡಿಕೆ

ಬೆಂಗಳೂರು, ಮಾ.23- ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ವಿಧಾನಸಭೆಯಲ್ಲಿ ಇಂದೂ ಪ್ರತಿಧ್ವನಿಸಿ‌ ಭಾರೀ ಗದ್ದಲ, ಕೋಲಾಹಲ ಉಂಟಾಗಿದ್ದರಿಂದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಲಾಪವನ್ನು ನಾಳೆ ಮುಂದೂಡಿದರು.
ಭೋಜನ ‌ವಿರಾಮದ ನಂತರ ಕಲಾಪ ಮತ್ತೆ ಸಮಾವೇಶಗೊಂಡಾಗಲೂ ಪ್ರತಿ ಪಕ್ಷ ಕಾಂಗ್ರೆಸ್ ರಾಸಲೀಲೆ ಪ್ರಕರಣದ ತನಿಖೆಯನ್ನು ಹೈಕೋರ್ಟಿನ ನ್ಯಾಯಾಧೀಶರಿಂದ ತನಿಖೆ ನಡರಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿ ಪಡಿಸಿದರು.
ಕೋರ್ಟಿನಿಂದ ತಡೆಯಾಜ್ಞೆ ತಂದಿರುವ ಆರು ಮಂದಿ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಂತ್ರಸ್ತೆಯ ಹೇಳಿಕೆ ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಿಬೇಕೆಂದು ಕಾಂಗ್ರೆಸ್ ಸದಸ್ಯರು ಬಿಗಿಪಟ್ಟು ಹಿಡಿದರು. ಕಲಾಪ ನಿಯಂತ್ರಣಕ್ಕೆ ಬಾರದ ಕಾರಣ ಸಭಾಧ್ಯಕ್ಷರು ಕಲಾಪವನ್ನು ನಾಳೆ ಬೆಳಿಗ್ಗೆ ಮುಂದೂಡಿದರು.
ಇದಕ್ಕೂ ಮುನ್ನ ಸುಗಮ ಕಲಾಪಕ್ಕೆ ಪ್ರತಿಪಕ್ಷ ನಾಯಕರ ಜತೆ ಕಾಗೇರಿ ನಡೆಸಿದ ಸಂಧಾನ ವಿಫಲವಾಗಿತ್ತು.
ಪ್ರತಿ ಪಕ್ಷ ಕಾಂಗ್ರೆಸ್ ಪ್ರತಿಭಟನೆಯ ನಡುವೆ ಸರ್ಕಾರ ಹಲವು ವಿಧೇಯಕಗಳನ್ನು ಮಂಡಿಸಿದೆ.