ವಿನಯ ಕುಲಕರ್ಣಿ ಬಂಧನ ರಾಜಕೀಯ ದುರುದ್ದೇಶ-ಶಾಸಕಿ ಕುಸುಮಾವತಿ

ಕುಂದಗೋಳ,ನ7 ಧಾರವಾಡ ಜಿ.ಪಂ. ಸದಸ್ಯ ಯೋಗೇಶಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವಿನಯ ಕುಲಕರ್ಣಿ ಅವರನ್ನು ರಾಜಕೀಯ ದುರುದ್ದೇಶದಿಂದ ವಶಕ್ಕೆ ಪಡೆದಿರುವುದು ಖಂಡನೀಯ ಎಂದು ಕುಂದಗೋಳ ಶಾಸಕಿ ಕುಸುಮಾವತಿ ಶಾಸಕಿ ತಿಳಿಸಿದ್ದಾರೆ.
ತಾಲೂಕಿನ ತಹಶೀಲ್ದಾರ್ ಕಚೇರಿಗೆ ತೆರಳಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ನಂತರ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾಂಗ್ರೆಸ್ ಪಕ್ಷದ ಮುಖಂಡರ ಏಳಿಗೆ ಸಹಿಸದೆ ಸಿಬಿಐ ಅಧಿಕಾರಿಗಳನ್ನು ತಮ್ಮ ಕೈಗೊಂಬೆಯನ್ನಾಗಿಸಿ ಇಂತಹ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಎಸ್ ಅಕ್ಕಿ ಮಾತನಾಡಿ ವಿನಯ ಕುಲಕರ್ಣಿ ಅವರ ಬಂಧನ ಹಿನ್ನೆಲೆಯಲ್ಲಿ ರಾಜಕೀಯ ಷಡ್ಯಂತ್ರ ಇದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡರಾದ ಅರವಿಂದ ಕಟಗಿ.ಜಗದೀಶ ಉಪ್ಪಿನ. ಜಿ.ಡಿ ಘೋರ್ಪಡೆ, ಉಮೇಶ ಹೇಬಸುರ ಸುರೇಶ ಗಂಗಾಯಿ, ಚಂದ್ರಶೇಖರ ಜುಟ್ಟಲ, ಬಸಲಿಂಗಪ್ಪ ಕೋರಿ, ಅಪ್ಪಣ್ಣ ಹಿರೇಗೌಡ್ರ, ಸಕ್ರಪ್ಪ ಲಮಾಣಿ, ರಾಯೆಸಾಬ ಕಳ್ಳಿಮನಿ, ದೃತಿ ಸಾಲ್ಮನಿ, ಗಿರೀಶ ಮುದಿಗೌಡ್ರ ಸಲಿ ಕಡ್ಲಿ, ಸೇರಿದಂತೆ ಕಾಂಗ್ರೆಸ್ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಗೋಳ ಮತ್ತು ಚಬ್ಬಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.