ನವದೆಹಲಿ,ಮಾ.26-‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹತೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು , “ವಿನಾಶ ಕಾಲೇ ವಿಪರೀತ ಬುದ್ಧಿ” ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಸಂಸದ ಶತ್ರುಜ್ಞ ಸಿನ್ಹಾ ನೇರ ವಾಗ್ದಾಳಿ ನಡೆಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಈ ಕ್ರಮ ಪ್ರಜಾಪ್ರಭುತ್ವ ರಕ್ಷಿಸಲು ಹೋರಾಟ ಮಾಡುತ್ತಿರುವ ಪ್ರತಿಪಕ್ಷಗಳಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದು ಪ್ರತಿಪಕ್ಷಗಳನ್ನು ಒಟ್ಟುಗೂಡಿಸಿದೆ ಎಂದು ಹೇಳಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಂತಹ ಆಪ್ ನಾಯಕರನ್ನು ಒಟ್ಟುಗೂಡಿಸಿದ ಗಂಭೀರ ವಿಷಯವಾಗಿದೆ ಎಂದು ಅವರು ಹೇಳಿದರು.ಅನರ್ಹತೆ ಪ್ರಜಾಪ್ರಭುತ್ವವನ್ನು ರಕ್ಷಿಸುವುದಲ್ಲದೆ, ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳು 100 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರು À “ವಿನಾಶ ಕಾಲೇ ವಿಪರೀತ ಬುದ್ಧಿ” ಎನ್ನುವುದಕ್ಕೆ ತಾಜಾ ಉದಾಹರಣೆ. ವಿನಾಶದ ಸಮಯ ಬಂದಾಗ ಒಬ್ಬರು ನಕಾರಾತ್ಮಕ ಅಥವಾ ಸ್ವಯಂ-ಹಾನಿಕಾರಕ ರೀತಿಯಲ್ಲಿ ಯೋಚಿಸುತ್ತಾರೆ ಎಂದರ್ಥ ಎಂದು ಅವರು ಹೇಳಿದ್ದಾರೆ.ದೇಶದಲ್ಲಿ ವಿರೋಧ ಪಕ್ಷಗಳ ಶಕ್ತಿಯನ್ನು ಮತ್ತಷ್ಟು ಒಟ್ಟುಗೂಡಲು ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ಧಾರೆ.