ವಿನೋಧ ಕರಣಂ ಇನ್ನಿಲ್ಲ


(ಸಂಜೆವಾಣಿ ವಾರ್ತೆ)
ಬಳ್ಳಾರಿ:ಮಾ,12- ಕಳೆದ ಬಾರಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ವಿನೋದ ಕರಣಂ (53)ಅವರು ಇಂದು ನಗರದ ತಾಳೂರು ರಸ್ತೆಯ ರೇಣುಕಾ ನಗರದ 15 ಕ್ರಾಸ್ ನಲ್ಲಿನ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಅವರು ಕಳೆದ ವರ್ಷ ತಮ್ಮ ಪುತ್ರಿಯ ಆತ್ಮಹತ್ಯೆಯಿಂದ ಮಾನಸಿಕವಾಗಿ ಬಳಲುತ್ತಿದ್ದರು. ಅವರು ಸಹ ಆತ್ಯಹತ್ಯೆ ಮಾಡಿಕೊಂಡಿದ್ದಾರೆಂಬ ಮಾಹಿತಿ ಇದೆ.
ಬಳ್ಳಾರಿಯವರಾದ ಇವರು ಹಗರಿಬೊಮ್ಮನಹಳ್ಳಿ ಗೆ ವಿವಾಹವಾಗಿ ಹೋಗಿದ್ದರು. ಆದರೆ ವಿವಾಹ ವಿಚ್ಛೇದನ ಪಡೆದಿದ್ದರು. ನಂತರ ಬಳ್ಳಾರಿಯಲ್ಲಿ ವಾಸವಾಗಿದ್ದರು.
ಈ ಬಗ್ಗೆ ಪೊಲೀಸ್ ತನಿಖೆಯಿಂದ ಸ್ಪಷ್ಟ ಮಾಹಿತಿ‌ ತಿಳಿಯಬೇಕಿದೆ.