ವಿನೋಬನಗರ ಶ್ರೀ ಚೌಡೇಶ್ವರಿ ದೇವಿಯ ಮೂರ್ತಿಯ ವೈಭವದ ಮೆರವಣಿಗೆ 

ಸಂಜೆವಾಣಿ ವಾರ್ತೆ

ದಾವಣಗೆರೆ.ಮಾ.೨೨ : ನಗರ ದೇವತೆ ಶ್ರೀ ದುರ್ಗಾಂಬಿಕಾ ಜಾತ್ರೆಯ ಸಂಭ್ರಮ ವಿನೋಬನಗರದ ಹತ್ತನೇ ಕ್ರಾಸ್ ನಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲೂ ಮನೆ ಮಾಡಿತ್ತು.ಜಾತ್ರೆ ಪ್ರಯುಕ್ತ ಚೌಡೇಶ್ವರಿ ದೇವಿಯ ಮೂರ್ತಿಯ ಮೆರವಣಿಗೆ ವೈಭವದಿಂದ ನೆರವೇರಿತು.ಈ ಮೆರವಣಿಗೆಗೆ ರಾಜ್ಯ ಎಸ್.ಟಿ. ಮೋರ್ಚಾ ಉಪಾಧ್ಯಕ್ಷ ಶ್ರೀನಿವಾಸ ಟಿ. ದಾಸಕರಿಯಪ್ಪ ಅವರು ಚಾಲನೆ ನೀಡಿ ಸಂಭ್ರಮಕ್ಕೆ ಸಾಕ್ಷಿಯಾದರು.ದೇವಿಯ ಮೂರ್ತಿಯ ಮೆರವಣಿಗೆಯು ದೇವಸ್ಥಾನದಿಂದ ಹೊರಟು ವಿನೋಬನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತ್ತು.ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಅಲ್ಲದೆ ವಿಶೇಷವಾಗಿ ಪುಷ್ಪಾಲಂಕಾರಗಳಿAದ ಕಂಗೊಳಿಸುವAತೆ ಮಾಡಲಾಗಿತ್ತು.ಭಕ್ತರು ದೇವಿಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು.