ವಿನ್ನರ್ ಅಕಾಡೆಮಿಯಲ್ಲಿ ರಾಜ್ಯೋತ್ಸವ ಆಚರಣೆ

 ದಾವಣಗೆರೆ. ನ.೨೮; ನಗರದ ವಿನ್ನರ್ಸ್ ಡಿಜಿಟಲ್ ಲೈಬ್ರರಿಯಲ್ಲಿ 66ನೇಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸರಳ ಹಾಗೂ ಅರ್ಥಪೂರ್ಣವಾಗಿ ಜರುಗಿತು. ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾದ  ಬಿ. ವಾಮದೇವಪ್ಪ ಕಾರ್ಯಕ್ರಮ ಉದ್ಘಾಟಿಸಿ, ಸ್ಪರ್ಧಾತ್ಮಕ ಪರೀಕ್ಷಾ ವಿದ್ಯಾರ್ಥಿಗಳಿಗೆ, ನೀವು ನಮ್ಮ ದೇಶದ ಯಾವುದೇ ರಾಜ್ಯದಲ್ಲಿರಿ, ಕನ್ನಡದ ಪರಿಚಾರಕರಾಗಿರಿ, ಎಲ್ಲಾದರೂ ಇರಿ, ಎಂತಾದರೂ ಇರಿ, ಕನ್ನಡಿಗರಾಗಿರಿ, ಕನ್ನಡ ಸಾಹಿತ್ಯಕ್ಕೆ ನಿಮ್ಮ ಕೊಡುಗೆ ನೀಡುವಲ್ಲಿ ಎಲ್ಲರೂ ಪ್ರಯತ್ನಿಸಿ ಎಂದು ಎಲ್ಲ ವಿದ್ಯಾರ್ಥಿ ಸಮೂಹಕ್ಕೆ ಪ್ರೇರಣೆಯ ಮಾತುಗಳನ್ನಾಡಿದರು.ಇದೇ ಸಂದರ್ಭದಲ್ಲಿ, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧಕರೆನಿಸಿ. 2021 ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಅನಿತಾ ಹೆಚ್. ದೊಡ್ಡಗೌಡರ್ , ರಂಗಭೂಮಿಯ ಸಾಧಕರಾದ  ಜಯಲಕ್ಷ್ಮಿ ಹೆಗಡೆ ಹಾಗೂ ಹೊಟೇಲ್ ನಡೆಸುತ್ತಿದ್ದು ಕಳೆದ ಹಲವಾರು ವರ್ಷಗಳಿಂದ ಕನ್ನಡದ ಬಾವುಟಗಳನ್ನು ಉಚಿತವಾಗಿ ವಿತರಿಸುತ್ತಿರುವ ಕನ್ನಡದ ಪರಿಚಾರಕರಾದ  ಸುರೇಶ್‌ರವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ವಿನ್ನರ್ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಡಾ. ಶಿವರಾಜ್ ಕಬ್ಬೂರ್ ಇದ್ದರು.