ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಣೆ

ಕಲಬುರಗಿ:ಮಾ.15: ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಎಲ್ಲ ಜಿಲ್ಲೆಗಳ ಸ್ತ್ರೀ ಶಕ್ತಿ ಒಕ್ಕೂಟಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಸ್ವ-ಸಹಾಯ ಗುಂಪುಗಳು ಉತ್ಪಾದಿಸುವ ಉತ್ಪನ್ನಗಳ ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ಸಮಾರೋಪ ಸಮಾರಂಭದಲ್ಲಿ ಮಹಿಳೆಯರಿಗೆ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನಕುಮಾರ ಯು ಅವರು ವಿತರಿಸಿದರು.
ಈ ಸಂದರ್ಭದಲ್ಲಿ ನಿರೂಪಣಾಧಿಕಾರಿ ಮುರುಗೇಶ್ ಗುಣಾರಿ, ಮಹಿಳಾ ಅಧಿಕಾರಿ ಶಿವಶರಣಪ್ಪ ಪೂಜಾರಿ, ಸ್ತ್ರೀಶಕ್ತಿ ಮೇಲ್ವಚಾರಕಿ ಅರುಣಾ ಗೋಟೂರ್, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಮಲ್ಲಮ್ಮ ಕಡ್ಲಾ ಸೇರಿದಂತೆ ಇತರರು ಇದ್ದರು.