ವಿಭಾಗ ಮಟ್ಟಕ್ಕೆ ಆಯ್ಕೆ

ಚಿಟಗುಪ್ಪಾ,ಸೆ.25-ಬೀದರ್‍ನ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪಟ್ಟಣದ ಸಕಾರಿ ಕನ್ಯಾ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.
ಥ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಅಲ್ಲದೆ ಚಕ್ರ ಎಸೆತ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಸ್ವಾತಿ ಪ್ರಕಾಶ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು, ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕರು ಮತ್ತು ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.