ವಿಭಾಗ ಮಟ್ಟಕ್ಕೆ ವಿದ್ಯಾರ್ಥಿಗಳು ಆಯ್ಕೆ

ಕೋಲಾರ,ನ.೨೮ಪದವಿ ಪೂರ್ವ ಶಿಕ್ಷಣ ಇಲಾಖೆ ಕೋಲಾರ ಹಾಗೂ ಚಿನ್ಮಯ ಸ್ವತಂತ್ರ ಪದವಿ ಪೂರ್ವ ಕಾಲೇಜು ಚೊಕ್ಕಹಳ್ಳಿ ಇವರ ಸಹಯೋಗದಲ್ಲಿ ನ ೨೨ರ ಬುಧವಾರದಂದು ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನಗರದ ಹೊಸ ಬಡಾವಣೆಯಲ್ಲಿರುವ ಮಹಿಳಾ ಸಮಾಜ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಪ್ರತಿಭಾ ಪ್ರದರ್ಶನ ನೀಡಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ವಿವರ- ಪ್ರಥಮ ಪಿಯುಸಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪವನ್ ಕುಮಾರ್ ಎನ್ ಹಾಗೂ ಗಿರಿ ಪ್ರಥಮ ಸ್ಥಾನ, ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ಪೂರ್ಣಿಮ ಪ್ರಥಮ ಸ್ಥಾನ, ಭಾವಗೀತೆ ಸ್ಪರ್ಧೆಯಲ್ಲಿ ದರ್ಶನ ತೃತೀಯ ಸ್ಥಾನ ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ನಂದಿಶ್ರೀ ತೃತೀಯ ಸ್ಥಾನ ಪಡೆದಿರುತ್ತಾರೆ. ದ್ವಿತೀಯ ಪಿಯುಸಿ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಕರ್ಣಿಕ ಎ. ಪ್ರಥಮ ಸ್ಥಾನ, ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ರಾಹುಲ್ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಈ ವಿದ್ಯಾರ್ಥಿಗಳನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಮುಖ್ಯ ಆಡಳಿತಾಧಿಕಾರಿ ನವೀನ ಎಂ ಅಭಿನಂದಿಸಿದ್ದಾರೆ.