ವಿಭಿನ್ನ ಕಥಾ ಹಂದರದ ಪರಿಶುದ್ಧಂ

’ಪರಿಶುದ್ಧಂ’ ಚಿತ್ರದ ಧ, ಟ್ರೇಲರ್  ಬಿಡುಗಡೆಯಾಗಿದೆ.  ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಮತ್ತಿತರರು ಪಾಲ್ಗೊಂಡು ಚಿತ್ರಕ್ಕೆ ಮತ್ತು ತಂಡಕ್ಕೆ ಶುಭ ಹಾರೈಸಿದರು.

ನಿರ್ದೇಶಕ ಆರೋನ್ ಕಾರ್ತಿಕ್‌ವೆಂಕಟೇಶ್ ಚಿತಕ್ಕೆ ಆಕ್ಷನ್ ಕಟ್ ಜೊತೆಗೆ, ನಿರ್ಮಾಣದಲ್ಲಿ ಪಾಲುದಾರರು. ಈ ವೇಳೆ ಮಾತನಾಡಿದ ಅವರು ಮದುವೆ ಅನ್ನುವುದು ಪದ್ದತಿ ಪರಿಶುದ್ದವಾದದು. ಗಂಡಹೆಂಡತಿ ಸಂಬಂಧದಲ್ಲಿ ಮೂರನೇ ವ್ಯಕ್ತಿ ಪ್ರವೇಶ ಆಗಬಾರದು ಎನ್ನುವುದನ್ನು ಸಂದೇಶದ ಜೊತೆಗೆ  ಕಮರ್ಷಿಯಲ್ ರೀತಿಯಲ್ಲಿ ತೋರಿಸಲಾಗಿದೆ ಎಂದರು.

ನಟಿ ಕಲ್ಪನಾರಂತೆ ಸ್ಪರ್ಶಾರೇಖಾ ತೂಕದ ಪಾತ್ರ ನಿರ್ವಹಿಸಿದ್ದಾರೆ.  ಎಂ.ಡಿ.ಕೌಶಿಕ್ ಕೊನೆ ದೃಶ್ಯದಲ್ಲಿ ಬರಲಿದ್ದು, ಭಾಗ-೨ರಲ್ಲಿ ಇವರಿಂದಲೇ ಸಿನಿಮಾ ಶುರುವಾಗುತ್ತದೆ.ಬೆಂಗಳೂರು, ಮಂಗಳೂರು, ತುಮಕೂರು, ಬ್ಯಾಂಕಾಕ್ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಇಂಗ್ಲೀಷ್ ಗೀತೆ ಇದ್ದು ಗ್ರ್ಯಾಮಿ ಪ್ರಶಸ್ತಿಗೆ ಕಳುಹಿಸಲಾಗುವುದು. ಎರಡೇ ಸ್ವರದಲ್ಲಿ ’ಕ’ ಅಕ್ಷರದೊಂದಿಗೆ ಹಾಡು ಬರೆಯಲಾಗಿದ್ದು ಎಂ.ಡಿ.ಪಲ್ಲವಿ ಧ್ವನಿಯಾಗಿದ್ದಾರೆ ಎಂದರು.

ನಟಿ ಸ್ಪರ್ಶ ರೇಖಾ ಮಹತ್ವದ ಪಾತ್ರ ಮಾಡೋಕೆ ನನ್ನಿಂದ ಆಗುತ್ತಾ ಎಂಬ ಗೊಂದಲದಲ್ಲಿದ್ದೆ. ಆದರೂ ಧೈರ್ಯ ಮಾಡಿದೆ. ಕನ್ನಡದಲ್ಲಿ ಗುರುತಿಸಿಕೊಳ್ಳಬೇಕಾದರೆ, ಬೇರೆ ಭಾಷೆಯಲ್ಲಿ ಸುತ್ತಾಡಿಕೊಂಡು ಬಂದರೆ ಮಾತ್ರ ಇಲ್ಲಿ ಸ್ವಾಗತ ಸಿಗುತ್ತದೆ. ಅದು ಈಗ ಬದಲಾವಣೆಯಾಗುತ್ತಿದೆ ಎಂದರು.

ನಾಯಕ ಕಾರ್ತಿಕ್‌ವೆಂಕಟೇಶ್ ,ನಾಯಕಿ ನೀತು‌ಮಾಹಿತಿ  ಹಂಚಿಕೊಂಡರು.  ರೋಹನ್‌ಕಿಡಿಯಾರ್ ಬಂಡವಾಳ ಹೂಡುವ ಜತೆಗೆ ಸ್ವರ್ಶಾರೇಖಾ ಅವರಿಗೆ ಜೋಡಿಯಾಗಿ ನಟಿಸಿದ್ದಾರೆ. ಕುಮಾರ್‌ರಾಥೋಡ್ ನಿರ್ಮಾಪಕರಲ್ಲಿ ಒಬ್ಬರು. ದಿಶಾಪೂವಯ್ಯ, ಭಾರ್ಗವ್, ಅರ್ಚನಾ, ವಿಕ್ಟರಿವಾಸು, ಕುರಿರಂಗ, ಮೈಸೂರು ರಮಾನಂದ್, ರಾಜ್‌ಚರಣ್, ದುಬೈರಫೀಕ್, ಎಂ.ಡಿ.ಕೌಶಿಕ್ ನಟಿಸಿದ್ದಾರೆ.