
ಬಳ್ಳಾರಿ,ಆ.15: 77 ನೇ ಸ್ವಾತಂತ್ರ್ಯ ದಿನದ ಅಂಗವಾಗಿ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಯುವಜನ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಎಸ್ಪಿ ರಂಜಿತ್‍ಕುಮಾರ್ ಬಂಡಾರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಎಡಿಸಿ ಮೊಹಮ್ಮದ್ ಜುಬೇರ್ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.
One attachment • Scanned by Gmail