ವಿಯನ್ನಾ ಉಗ್ರರ ದಾಳಿ ಇಬ್ಬರ ಸಾವು, ಹಲವರಿಗೆ ಗಾಯ

ವಿಯನ್ನಾ, (ಆಸ್ಟ್ರಿಯಾ) ನ.೩- ಆಸ್ಟ್ರಿಯಾದ ವಿಯೆನ್ನಾದಲ್ಲಿ ಏಕಕಾಲದಲ್ಲಿ ೬ ಕಡೆ ನಡೆದ ಭಯೋತ್ಪಾದಕರ ದಾಳಿಯಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು ೧೫ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಗುಂಡಿನ ದಾಳಿಯಲ್ಲಿ ಓರ್ವ ಶಂಕಿತ ಭಯೋತ್ಪಾದಕನನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಆಸ್ಟ್ರಿಯಾದ ಚಾನ್ಸಲರ್ ಸೆಬಾಸ್ಟಿಯನ್ ಕ್ರೂಜ್ ಹೇಳಿದ್ದಾರೆ.

ಭಯೋತ್ಪಾದಕ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಏಕಕಾಲದಲ್ಲಿ ಆರು ಕಡೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಇದರ ಹಿಂದೆ ಯಾವ ಸಂಘಟನೆ ಇದೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ ಎಂದಿದ್ದಾರೆ.

ಆಸ್ಟ್ರಿಯಾದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಾಳಿ ಮಾಡಿದ ಮರುಕ್ಷಣವೇ ಬಾರ್ ಅಂಡ್ ರೆಸ್ಟೋರೆಂಟ್ ಸೇರಿದಂತೆ ೬ ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದ್ದು ಅಲ್ಲಿನ ಜನರು ಭಯಭೀತರಾಗಿದ್ದಾರೆ.

ನಾಗರಿಕರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಶಂಕಿತ ಭಯೋತ್ಪಾದಕನನ್ನ ಪೊಲೀಸರು ಹೊಡೆದು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಇನ್ನು ಎಷ್ಟು ಮಂದಿ ಭಯೋತ್ಪಾದಕರು ಇದ್ದಾರೆ ಎನ್ನುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಗಾಯಗೊಂಡಿರುವ ೧೫ ಮಂದಿ ಆರೋಗ್ಯ ಸ್ಥಿತಿ ತೀವ್ರ ಬಿಗಡಾಯಿಸಿದೆ ಎಂದು ಅವರು ತಿಳಿಸಿದ್ದಾರೆ.

ಹೇಯ ಕೃತ್ಯ:
ಅಮಾಯಕ ನಾಗರಿಕರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವುದು ಕೃತ್ಯ ಎಂದು ಚಾನ್ಸಲರ್ ಸೆಬಾಸ್ಟಿಯನ್ ಕ್ರೂಜ್ ತೀವ್ರವಾಗಿ ಖಂಡಿಸಿದ್ದಾರೆ.

ಭಯೋತ್ಪಾದಕ ದಾಳಿಯಲ್ಲಿ ಎಷ್ಟು ಮಂದಿ ಭಾಗಿಯಾಗಿದ್ದಾರೆ ಎನ್ನುವ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಸ್ಥಳದಲ್ಲಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ ಭಯೋತ್ಪಾದಕರ ವಿರುದ್ಧ. ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಉಗ್ರರ ದಾಳಿ ವಿಶ್ವ ಖಂಡನೆ
ಆಸ್ಟ್ರಿಯಾದ ವಿಯನ್ನಾದಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿಶ್ವ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

ಜಾಗತಿಕವಾಗಿ ಪಿಡುಗಾಗಿರುವ ಭಯೋತ್ಪಾದನೆ ವಿರುದ್ಧ ವಿಶ್ವ ಒಂದಾಗಿ ಹೋರಾಟ ಮಾಡುವ ಅಗತ್ಯವಿದೆ ಎಂದಿದ್ದಾರೆ.

ಆಸ್ಟ್ರೀಯ ಜೊತೆ ಭಾರತ ಸೇರಿದಂತೆ ಅನೇಕ ದೇಶಗಳು ಜೊತೆ ನಿಲ್ಲುವುದಾಗಿ ನೈತಿಕ ಭರವಸೆಯನ್ನು ನೀಡುವೆ.

ಪ್ರದಾನಿ ಸಂತಾಪ:
ವಿಯೆನ್ನಾ ದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಕುಟುಂಬಗಳ ಸದಸ್ಯರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಯೋತ್ಪಾದನಾ ದಾಳಿ ತೀವ್ರ ಖಂಡನೆ ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಇಂತಹ ಘಟನೆಯ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ

ಆಶ್ಚರ್ಯ ತಂದಿದೆ:
ಆಸ್ಟ್ರಿಯಾದ ವಿಯನ್ನಾದಲ್ಲಿ ನಡೆದ ಭಯೋತ್ಪಾದಕರ ದಾಳಿ ಆಘಾತ ತರಿಸಿದೆ. ವಿಯನ್ನಾದ ಜನತೆಯ ಜೊತೆ ಇಂಗ್ಲೆಂಡ್ ನಿಲ್ಲಲಿದೆ ಭಯೋತ್ಪಾದನೆ ವಿರುದ್ಧ ಜಂಟಿಯಾಗಿ ಹೋರಾಟ ಮಾಡುವ ಅಗತ್ಯವಿದೆ ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.