ವಿರಾಟಪುರದ ವಿರಾಗಿ ಪ್ರಿಮಿಯಂ ಶೋಗೆ ಚಾಲನೆ

ಕಲಬುರಗಿ: ಜ.12:ಹಾನಗಲ್ ಕುಮಾರ ಶಿವಯೋಗಿಗಳ ಜೀವನ ಆಧಾರಿತ ವಿರಾಟಪುರ ವಿರಾಗಿ ಚಲನಚಿತ್ರ ಜ.13ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದ್ದು, ಅದರ ಪೂರ್ವದಂಗವಾಗಿ ಇಂದು ಗುರುವಾರ ನಗರದ ಸಂಗಮ ಟಾಕೀಸ್ ದಲ್ಲಿ ಪ್ರಿಮಿಯಂ ಶೋ ಪ್ರದರ್ಶನ ನಡೆಯಿತು.

ನಾಡಿನ ಮಠಾಧೀಶರ ಹಾಗೂ ಗಣ್ಯರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಪ್ರಿಮಿಯಂ ಶೋಗೆ ಹಾನಗಲ್ ಕುಮಾರ ಶಿವಯೋಗಿಗಳು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಶ್ರೀ ಶೈಲಂ ಜಗದ್ಗರು ಪೀಠದ ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು, ಚೌದಾಪುರಿ ಹಿರೇಮಠದ ಡಾ. ರಾಜಶೇಖರ ಶಿವಾಚಾರ್ಯ ರು, ಮಾದನಹಿಪ್ಪರಗಾದ ಅಭಿನವ ಶಿವಲಿಂಗ ಮಹಾಸ್ವಾಮಿಗಳು, ಮಾಡ್ಯಾಳದ ಮರಳಸಿದ್ದೇಶ್ವರ ಮಹಾಸ್ವಾಮಿಗಳು, ಮುಗುಳನಾಗಾಂವ ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಮುತ್ಯಾನ ಬಬಲಾದ ಮಠದ ಗುರುಪಾದಲಿಂಗ ಮಹಾಸ್ವಾಮಿಗಳು, ಯಡ್ರಾಮಿಯ ಸಿದ್ದಲಿಂಗ ಮಹಾಸ್ವಾಮಿಗಳು ನಾಡಿನ 50ಕ್ಕೂ ಮಠಾಧೀಶರು ಚಲನಚಿತ್ರ ವೀಕ್ಷಿಸಿದರು.

ಸಂಸದ ಡಾ. ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ, ಮಾಜಿ ಅಧ್ಯಕ್ಷ ಬಸವರಾಜ ಭೀಮಳ್ಳಿ ಸೇರಿದಂತೆ ಮುಂತಾದವರಿದ್ದರು.