ವಿರಾಟ್ ಕೊಹ್ಲಿಯನ್ನು ಹುರಿದುಂಬಿಸಿದ ಅನುಷ್ಕಾ

ಬೆಂಗಳೂರು,ಏ.೧೧-ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಜನಪ್ರಿಯ ತಾರಾ ದಂಪತಿ. ಈ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡುವ ಮೂಲಕ ಬಹುತೇಕ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಒಬ್ಬರಿಗೊಬ್ಬರು ಶಕ್ತಿ ಆಗಿದ್ದಾರೆ.
ಪತ್ನಿ ಅನುಷ್ಕಾ ಶರ್ಮಾ ಅವರು ತಮ್ಮ ಶಕ್ತಿ ಎಂದು ಅನೇಕ ಸಂದರ್ಶನಗಳಲ್ಲಿ ವಿರಾಟ್ ಕೊಹ್ಲಿ ಹೇಳಿಕೊಂಡು ಬಂದಿದ್ದಾರೆ. ಕೊಹ್ಲಿ ಆರ್‌ಸಿಬಿ ಜರ್ಸಿ ಅಥವಾ ಇಂಡಿಯನ್ ಕ್ರಿಕೆಟ್ ಉಡುಗೆ ಧರಿಸಿಲಿ, ಬಾಲಿವುಡ್ ನಟಿ ಅನುಷ್ಕಾ ತಮ್ಮ ಪತಿಯನ್ನು ಹುರಿದುಂಬಿಸುವ ದೃಶ್ಯಗಳು ಕಂಡು ಬರುತ್ತವೆ.
ಸೋಮವಾರ ಕೂಡ ನಟಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ೨೦೨೩ರ ಸಲುವಾಗಿ ಬೆಂಗಳೂರಿಗೆ ಆಗಮಿಸಿದ್ದರು. ಲಖನೌ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಪಂದ್ಯ ನಡೆದಿದೆ. ತಮ್ಮ ಪತಿಯ ಆರ್‌ಸಿಬಿ ತಂಡವನ್ನು ಹುರಿದುಂಬಿಸಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಅವರ ಫೋಟೋಗಳೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.