ವಿವಾದಾತ್ಮಕ ಹೇಳಿಕೆ ನಟ‌ ರಜನಿಕಾಂತ್ ಗೆ ಸಮನ್ಸ್

ತುತೂಕಡಿ, ಡಿ 21- ವಿವಾದಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ಗುರಿಯಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಗೆ ಎರಡನೇ ಬಾರಿಗೆ ಏಕ ವ್ಯಕ್ತಿ ಆಯೋಗ ಸಮನ್ಸ್ ಜಾರಿ ಮಾಡಿದೆ.
ಎರಡು ವರ್ಷದ ಹಿಂದೆ ನಡೆದಿದ್ದ ಪೊಲೀಸ್ ಫೈರಿಂಗ್ ಕುರಿತು ವಿಚಾರಣೆ ನಡೆಸುತ್ತಿರುವ ಆಯೋಗ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದೆ.
2018ರ ಮೇ ತಿಂಗಳಲ್ಲಿ ರಜನಿಕಾಂತ್ ಸಂತ್ರಸ್ತರನ್ನು ಭೇಟಿ ಮಾಡುವ ವೇಳೆ ಸ್ಟರ್ಲಿಂಗ್ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಸಮಾಜ ವಿರೋಧಿ ಶಕ್ತಿಗಳು ಪ್ರತಿಭಟನೆಯೊಳಗೆ ಸೇರಿಕೊಂಡಿದ್ದಾರೆ ಎಂದು ಅವರು ಹೇಳಿದ್ದರು.
ಫೆಬ್ರವರಿಯಲ್ಲಿ ನಿವೃತ್ತ ನ್ಯಾಯಾಧೀಶ ಅರುಣಾ ಜಗದೀಶನ್ ನೇತೃತ್ವದ ಆಯೋಗ, ರಜನಿಕಾಂತ್ ಗೆ ಸಮನ್ಸ್ ನೀಡಿತ್ತು. ಆದರೆ, ತುತುಕೂಡಿಗೆ ಬಂದರೆ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗಲಿದೆ ಎಂದು ಹೇಳುವ ಮೂಲಕ ರಜನಿಕಾಂತ್ ವಿನಾಯಿತಿ ಬಯಸಿದ್ದರು.

ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಆಯೋಗ ಸಮನ್ಸ್ ನೀಡಿದೆ. 24 ನೇ ಹಂತದ ವಿಚಾರಣೆಯನ್ನು 2021 ರ ಜನವರಿ 18 ರಿಂದ 22 ರವರೆಗೆ ನಿಗದಿಪಡಿಸಲಾಗಿದೆ. ರಿಜಿಸ್ಟರ್ ಪೋಸ್ಟ್ ಮೂಲಕ ಸಮನ್ಸ್ ಕಳುಹಿಸಲಾಗಿದೆ ಎಂದು ಆಯೋಗದ ಮೂಲಗಳು ಖಚಿತಪಡಿಸಿವೆ.