
ಜೇವರ್ಗಿ,ಏ.9-ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನೆನ್ನಲಾದ ಯುವಕನೊಬ್ಬನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದಲ್ಲಿ ನಡೆದಿದೆ.
ಸಂತೋಷ ಶ್ರೀಮಂತ ಹೆಗಡೆ (22) ಕೊಲೆಯಾದ ಯುವಕ.
ಒಕ್ಕಲುತನ ಮಾಡುತ್ತಿದ್ದ ಸಂತೋಷ ಮಹಿಳೆಯೊಬ್ಬಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನೆನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ.
ಗ್ರಾಮದ ಶಾಲೆಯ ಆವರಣದಲ್ಲಿ ಸಂತೋಷ ಶವ ಪತ್ತೆಯಾಗಿದ್ದು, ಸುದ್ದಿ ತಿಳಿದು ನೆಲೋಗಿ ಠಾಣೆ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಕೊಲೆಯಾದ ಸಂತೋಷ ಕುಟುಂಬದವರು ನಿಂಗಮ್ಮ ಗಂಡ ನಾಗಪ್ಪ ಎಂಬುವವರ ವಿರುದ್ಧ ನೆಲೋಗಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.