ವಿವಿಧೆಡೆ ವಿಶ್ವ ಪರಿಸರ ದಿನಾಚರಣೆ

filter: 0; fileterIntensity: 0.0; filterMask: 0; captureOrientation: 0; hdrForward: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: off;albedo: ;confidence: ;motionLevel: 0;weatherinfo: null;temperature: 42;

ಶಿಡ್ಲಘಟ್ಟ.ಜೂ,೬:ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ೨ ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಜೆ.ಪೂಜಾ ತಿಳಿಸಿದರು.
ನಗರದ ನ್ಯಾಯಾಲಯ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ಅರಣ್ಯ ಇಲಾಖೆ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮ ಉದ್ಟಾಟಿಸಿ ಅವರು ಮಾತನಾಡಿದರು.
ವಲಯ ಅರಣ್ಯ ಅಧಿಕಾರಿ ಎಸ್ ಸುಧಾಕರ್ ಪರಿಸರ ನಾಶವನ್ನು ತಡೆದು ಮರ ಗಿಡಗಳನ್ನು ಯಥೇಚ್ಛವಾಗಿ ಬೆಳೆಸಬೇಕು. ಇದರಿಂದ ಪರಿಸರ ಸಮತೋಲನ ಕಾಣಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ವಕೀಲ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಭಾಸ್ಕರ್, ಪಾಪರೆಡ್ಡಿ, ಕೃಷ್ಣಮೂರ್ತಿ, ಶ್ರೀನಾಥ್, ಚೇತನ್, ನವೀನ್, ಅರಣ್ಯ ಅಧಿಕಾರಿಗಳು ಸಿಬ್ಬಂದಿ ಮುಂತಾದವರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ(ರಿ)ಬಿ ಸಿ ಟ್ರಸ್ಟ್, ಹಾಗೂ ಅರಣ್ಯ ಇಲಾಖೆ, ಇಂದಿರಾ ಗಾಂಧಿ ವಸತಿ ಶಾಲೆಯ ಸಂಯುಕ್ತಕ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅಪೇಗೌಡನಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದರು.
ಜಿಲ್ಲಾ ಯೋಜನಾಧಿಕಾರಿ ಪ್ರಶಾಂತ್ ಉದ್ಘಾಟಿಸಿ ಮಾತನಾಡಿ ಪರಿಸರದ ರಕ್ಷಣೆ ಮತ್ತು ಬೆಳವಣಿಗೆಯ ನಮ್ಮೆಲ್ಲರ ಹೊಣೆಯಾಗಿz ಎಂದರು.
ವಲಯ ಅರಣ್ಯ ಅಧಿಕಾರಿ ಸುಧಾಕರ್, ಜಿಲ್ಲಾ ಜನಜಾಗೃತಿ ಸದಸ್ಯರಾದ ತ್ಯಾಗರಾಜು,ಶಾಲೆಯ ಪ್ರಭಾರ ಪ್ರಾಂಶುಪಾಲರಾದ ಪ್ರಸಾದ್,ತಾಲ್ಲೂಕು ಯೋಜನಾಧಿಕಾರಿ ಸುರೇಶ್ ಗೌಡ ಅರಣ್ಯ ವಲಯ ಅಧಿಕಾರಿ ಜೈಯಚಂದ್ರ ಭಾಗವಹಿಸಿದ್ದರು.