ಚಿತ್ರದುರ್ಗ.ಜೂ.೧೬; ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸ ಕಟ್ಟಡದ ಆವರಣದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇದೇ ಜೂನ್ 19ರಂದು ಬೆಳಿಗ್ಗೆ 10ಕ್ಕೆ “ಜಿಲ್ಲಾ ಯುವ ಉತ್ಸವ” ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮ ಆಯೋಜನೆ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಮಾರೋಪ ಸಮಾರಂಭದ ಅಂಗವಾಗಿ, ಯುವ ಜನರ ಪ್ರತಿಭೆಗಳನ್ನು ಪ್ರದರ್ಶಿಸಲು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸಾಧನೆಗಳ ಬಗ್ಗೆ ಪರಿಚಯ ಹಾಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದ್ದು, ಶಿಷ್ಠಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ವಿವಿಧ ಇಲಾಖೆಗಳು ಸಮನ್ವಯ ಸಾಧಿಸಿ, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಬೇಕು ಎಂದು ಹೇಳಿದರು.ಸರ್ಕಾರದ ಯೋಜನೆಗಳ ಕುರಿತು ಪ್ರದರ್ಶನ ಮಳಿಗೆ:ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳು, ಸಾಧನೆಗಳ ಕುರಿತು ಯುವ ಜನರಿಗೆ, ಸಾರ್ವಜನಿಕರಿಗೆ ತಲುಪಿಸಲು ಪ್ರದರ್ಶನ ಮಳಿಗೆಗಳನ್ನು ತೆರೆಯಲು ಕ್ರಮವಹಿಸಬೇಕು ಎಂದು ತಿಳಿಸಿದರು.ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ತೋಟಗಾರಿಕೆ, ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೇಷ್ಮೆ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಲೀಡ್ ಬ್ಯಾಂಕ್ ಸೇರಿದಂತೆ ವಿವಿಧ ಇಲಾಖೆಗಳು ಪ್ರದರ್ಶನ ಮಳಿಗೆಗಳನ್ನು ತೆರೆದು ಸರ್ಕಾರದ ವಿವಿಧ ಯೋಜನೆ, ಸಾಧನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು.ನೆಹರು ಯುವಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎನ್.ಸುಹಾಸ್ ಮಾತನಾಡಿ, ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಮುಂಬರುವ ಆಗಸ್ಟ್ 15ಕ್ಕೆ ಮುಕ್ತಾಯಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯವು ದೇಶದ ಎಲ್ಲ ಜಿಲ್ಲೆಗಳಲ್ಲಿಯೂ ದೊಡ್ಡ ಸಂಭ್ರಮದ ರೀತಿಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ. ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಯುವ ಉತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುವುದು ಎಂದರು.ಯುವ ಉತ್ಸವವು ಯುವ ಜನರಲ್ಲಿನ ಪ್ರತಿಭೆ ಹೊರಹಾಕಲು ವೇದಿಕೆ ಹಾಗೂ ಅವಕಾಶ ಕಲ್ಪಿಸಲಾಗುತ್ತಿದೆ. ಜಿಲ್ಲಾ ಮಟ್ಟ, ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟ ಸೇರಿದಂತೆ ಒಟ್ಟು ಮೂರು ಹಂತದಲ್ಲಿ ಯುವ ಉತ್ಸವವು ನಡೆಯಲಿದೆ ಎಂದರು.