ವಿವಿಧ ಕಾಮಗಾರಿಗಳ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು


ಬಳ್ಳಾರಿ,ಜು.21: ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ನಗರದ ನಲ್ಲಚೇರವು ಪ್ರದೇಶದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಬುಧವಾರ ಪರಿಶೀಲನೆ ನಡೆಸಿದರು.
13 ಎಕರೆ ಪ್ರದೇಶದಲ್ಲಿ 1.85 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನಲ್ಲಚೇರವು ಕೆರೆ ಕಾಮಗಾರಿ, 7.5 ಕೋಟಿ ರೂ.ವೆಚ್ಚದಲ್ಲಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ನಡೆಯುತ್ತಿರುವ ಹಾಕಿ ಕ್ರೀಡಾಂಗಣ, ಸಿಂಥೆಟಿಕ್ ಟ್ರ್ಯಾಕ್ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಅನೇಕ ಸಲಹೆಸ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಮಾಜಿ ಸಂಸದರಾದ ಜೆ.ಶಾಂತಾ, ಸಣ್ಣಫಕೀರಪ್ಪ,ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೋಹನ್,ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಹರಿಸಿಂಗ್ ರಾಠೋಡ ಸೇರಿದಂತೆ ಇನ್ನೀತರರು ಇದ್ದರು.

Attachments area