ವಿವಿಧ ಕಾಮಗಾರಿಗೆ ಭೂಮಿಪೂಜೆ


ಕುಂದಗೋಳ,ಮಾ6: ತಾಲೂಕಿನ ಹೊಸಕಟ್ಟಿ ಗ್ರಾಮದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿ ಮರಿಯಮ್ಮ ದೇವಿ ದೇವಸ್ಥಾನದ ಅಭಿವೃದ್ಧಿ, ಮರಿಯಮ್ಮ ದೇವಿ ದೇವಸ್ಥಾನಕ್ಕೆ ಹೋಗುವ ರಸ್ತೆ ಸುಧಾರಣೆ, ಗರಡಿ ಮನೆ ಭವನ ನಿರ್ಮಾಣ ಮುಂದುವರೆದ ಕಾಮಗಾರಿ ಹಾಗೂ ಸಿ.ಸಿ ಗಟಾರ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಬಳಿಕ ಹೊಸಕಟ್ಟಿ ಗ್ರಾಮದಲ್ಲಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಿರಿಯರು ಉಪಸ್ಥಿತರಿದ್ದರು.