ವಿವಿಧ ಕಾಮಗಾರಿಗೆ ಮಲ್ಕಾಪುರೆ ಚಾಲನೆ

ಬೀದರ್:ಮಾ.1: ವಿಧಾನ ಪರಿಷತ್ ಅನುದಾನದಲ್ಲಿ ನಗರದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಲಾಯಿತು.

ಇಲ್ಲಿನ ಶಿವಾಜಿ ನಗರ, ರಾಂಪುರೆ ಕಾಲನಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ಮಾತನಾಡಿ, ಎರಡು ಬಡಾವಣೆಗಳಲ್ಲಿ 25 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸಿಸಿ ರಸ್ತೆ, ಚರಂಡಿ ಸೇರಿ ಮೂಲಭೂತ ಸೌಕರ್ಯ ಒದಗಿಸಲು ರಾಜ್ಯ ಸರ್ಕಾರ ಸಾಕಷ್ಟು ಅನುದಾನ ಒದಗಿಸಿದೆ. ನಗರದ ವಿವಿಧ ಬಡಾವಣೆಯಲ್ಲಿ ಕೋಟ್ಯಾಂತರ ರೂ. ಅನುದಾನದಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದರು.

ಕೇಂದ್ರ, ರಾಜ್ಯದ ಡಬಲ್ ಇಂಜಿನ್ ಸರ್ಕಾರ ಜನರ ಆರ್ಥಿಕ ಮಟ್ಟ ಸುಧಾರಣೆ ಹಾಗೂ ಸೌಲಭ್ಯ ಒದಗಿಸಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಲಾಭ ಪಡೆದು ಮುಂದೆ ಬರಬೇಕು ಎಂದು ಹೇಳಿದರು.

ನಗರಸಭೆ ಸದಸ್ಯರಾದ ರಾಜಾರಾಮ ಚಿಟ್ಟಾ, ಶಶಿ ಹೊಸಳ್ಳಿ, ಪ್ರಮುಖರಾದ ಪೀರಪ್ಪ ಯರನಳ್ಳಿ, ದತ್ತು ಪಾಟೀಲ್, ಚಂದ್ರಶೇಖರ ಪಾಟೀಲ್, ಸಂಜುಕುಮಾರ, ಸಾಯಿನಾಥ, ಗುರುನಾಥ ರಾಜಗೀರಾ, ಪುಟ್ಟು ಇತರರಿದ್ದರು.