ವಿವಿಧ ಕಾಮಗಾರಿ ಸ್ಥಳಕ್ಕೆ ಸಹಾಯಕ ನಿರ್ದೇಶಕ ಭೇಟಿ ಪರಿಶೀಲನೆ

ರಾಯಚೂರು.ನ.೯-ಜಿಲ್ಲೆಯ ಸಿರವಾರ ತಾಲೂಕು ವ್ಯಾಪ್ತಿಯಲ್ಲಿ ಬರುವ ಹೀರಾ, ಮಲ್ಲಟ, ಚಿಂಚರಕಿ ಹಾಗೂ ಹೀರಹಣಿಗಿ ಗ್ರಾಮ ಪಂಚಾಯತಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿರುವ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಸಿರವಾರ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಶರ್ಫುನ್ನಿಸಾ ಬೇಗಂ ಅವರು ಭೇಟಿ ನೀಡಿ ಪರಿಶೀಲಿಸಿದರು.
ಮೂದಲಿಗೆ ಚಿಂಚರಕಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತಿ ಕಟ್ಟಡ ನಿರ್ಮಾಣ
ಕಾಮಗಾರಿ ಪರಿಶೀಲಿಸುತ್ತ ಮುಂದಿನ ಎರಡು ತಿಂಗಳ ಓಳಗಾಗಿ ಬಾಕಿಯಿರುವ ಕಾಮಗಾರಿ ಪೂರ್ಣಗೊಳಿಸಬೇಕು ಎಂದು
ಟಿಇಎ ಅವರಿಗೆ ಸೂಚನೆ ನೀಡಿದರು.
ನಂತರ ಹೀರಾ ಗ್ರಾಮದಲ್ಲಿ ಪ್ರಗತಿ ಹಂತದಲ್ಲಿರುವ ಗ್ರಾಮೀಣ ಗೋದಾಮು ಕಟ್ಟಡ ಸ್ಥಳಕ್ಕೆ ತೆರಳಿ ೧೫ ದಿನದೊಳಗಾಗಿ ಪೂರ್ಣಗೊಳಿಸಬೇಕೆಂದು ನಿರ್ದೇಶನ ನೀಡಿದರು.
ಹೀರಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಿರ್ಮಾಣಗೊಂಡಿರುವ ಬಾಸ್ಕೆಟ್ ಬಾಲ್ ಪರಿಶೀಲಿಸಿದರು. ನಂತರ ಮಲ್ಲಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕುರುಕುಂದಾ ಗ್ರಾಮದಲ್ಲಿ ಶಾಲಾ ಭೋಜನಾಲಯ, ಶಾಲಾ ಶೌಚಾಲಯ ಕಟ್ಟಡ ಕಾಮಗಾರಿಯನ್ನು ಮುಂದಿನ ಡಿಸೆಂಬರ್ ಅಂತ್ಯದೊಳಗಾಗಿ ಪೂರ್ಣ ಗೊಳಿಸುವಂತೆ ಟಿಇಎ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಟಿಸಿ, ಟಿಇಎ, ಐಇಸಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಇದ್ದರು.