ವಿವಿಧ ಕ್ರೀಡೆ: ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಕಲಬುರಗಿ,ಆ.28:2023-24ನೇ ಶೈಕ್ಷಣಿಕ ಸಾಲಿಗೆ ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹೋಬಳಿ ಮಟ್ಟದ ಪ್ರೌಢವಿಭಾಗದ ಕ್ರೀಡಾಕೂಟದಲ್ಲಿ ಭಾಗವಹಿಸಿ ಕೆಳಕಂಡ ಕ್ರೀಡೆಗಳಲ್ಲಿ ಜಯಗಳಿಸಿ ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಪಿ.ಶುಭ ಹಾಗೂ ವಸತಿ ಶಾಲೆಯ ಪ್ರಾಂಶುಪಾಲರಾದ ಸುರೇಶ ಆಲ್ದಾರ್ತಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿವಿಧ ಕ್ರೀಡೆಗಳಲ್ಲಿ ಜಯ ಸಾಧಿಸಿದ ವಿವರ ಇಂತಿದೆ. ಬಾಲಕಿಯರ ವಾಲಿಬಾಲ್, ಬಾಲಕಿಯರ ಕಬ್ಬಡ್ಡಿ, ಬಾಲಕರ ಚಕ್ರ ಎಸೆತ ಮತ್ತು ಬಾಲಕಿಯರ ಗುಂಡು ಎಸೆತ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಬಾಲಕಿಯರ ಥ್ರೋಬಾಲ್, ಬಾಲಕರ ವಾಲಿಬಾಲ್, ಬಾಲಕಿಯರ ಗುಂಡು ಎಸೆತ, ಬಾಲಕಿಯರ 100 ಮೀಟರ್ ಓಟ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಬಾಲಕರ ಉದ್ದ ಜಿಗಿತ, ಬಾಲಕರ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ವಸತಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.