ವಿವಿಧ ಚೆಕ್‍ಪೋಸ್ಟ್‍ಗಳಿಗೆ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ದಿಢೀರ ಭೇಟಿ: ಪರಿಶೀಲನೆ

ವಿಜಯಪುರ:ಮಾ.23: ಮುಂಬರುವ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧೆಡೆ ಸ್ಥಾಪಿಸಲಾದ ಚೆಕ್‍ಪೋಸ್ಟ್‍ಗಳಿಗೆ ಮಂಗಳವಾರ ರಾತ್ರಿ ವಿಜಯಪುರ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ದಿಢೀರ ಭೇಟಿ ನೀಡಿ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಿದರು.
ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದಾಪುರ, ಯತ್ನಾಳ ಸೇರಿದಂತೆ ವಿವಿಧೆಡೆ ಸ್ಥಾಪಿಸಲಾದ ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿದ ಅವರು, ಚುನಾವಣಾ ಅಕ್ರಮಗಳನ್ನು ತಡೆಯಲು ನೀತಿ ಸಂಹಿತೆ ಪೂರ್ವ ಕಾರ್ಯ ನಿರ್ವಹಿಸಲಾಗುತ್ತಿದ್ದು, ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಂತಿರುವ ಒಳ ಬರುವ ಮತ್ತು ಹೊರ ಹೋಗುವ ವಾಹನಗಳನ್ನ ಕಡ್ಡಾಯವಾಗಿ ತಪಾಸಿಸಬೇಕು ಎಲ್ಲಾ ವಾಹನಗಳ ದಾಖಲೀಕರಣ ಮಾಡಬೇಕು. ಯಾವುದೇ ರೀತಿಯ ಅಕ್ರಮ ವಸ್ತುಗಳ ಸಾಗಾಣಿಕೆ ಕಂಡು ಬಂದಲ್ಲಿ ತಕ್ಷಣ ಜಪ್ತಿ ಮಾಡುವ ಜೊತೆಗೆ ಕಾನೂನಿನ್ವಯ ಸೂಕ್ತ ಕ್ರಮ ಕೈಗೊಳ್ಳಬೇಕು. ಚೆಕ್‍ಪೋಸ್ಟ್ ಮೂಲಕ ಒಳಬರುವ ಹೊರ ಹೋಗುವ ಪ್ರತಿ ವಾಹನದ ಮೇಲೆ ನಿಗಾ ವಹಿಸಬೇಕು. ಯಾವುದೇ ಅಕ್ರಮ ನಡೆದಲ್ಲಿ ವಶಕ್ಕೆ ಪಡೆಯಬೇಕು. ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಬೇಕು. ಚೆಕ್‍ಪೋಸ್ಟ್‍ಗಳಲ್ಲಿನÀ ಅಧಿಕಾರಿಗಳು ಕರ್ತವ್ಯದಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು. ಯಾವುದೇ ಲೋಪಕ್ಕೆ ಆಸ್ಪದ ನೀಡದೇ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದ ಅವರು ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಜಿಲ್ಲಾ ಚುನಾವಣಾ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಿದರು.
ಹಾಜರಾತಿ ವಾಹನಗಳ ವಹಿ ಮುಂತಾದವುಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರಾದ ಆನಂದ್ ಕುಲಕರ್ಣಿ ಮತ್ತು ಪೆÇಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.