ವಿವಿಧ ಜಯಂತಿಗಳ ಪೂರ್ವಭಾವಿ ಸಭೆ

ಹುಬ್ಬಳ್ಳಿ,ಜೂ23: ಜೂನ್ 27 ರಂದು ಶ್ರೀ ಕೆಂಪೇಗೌಡ ಜಯಂತಿ, ಜುಲೈ 2 ರಂದು ಫ.ಗು. ಹಳಕಟ್ಟಿಯವರ ಜನ್ಮದಿನ- ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಾಗೂ ಜುಲೈ 11 ರಂದು ಶ್ರೀ ಹಡಪದ ಅಪ್ಪಣ್ಣ ಜಯಂತಿಗಳನ್ನು ಅಂದು ಬೆಳಿಗ್ಗೆ 11 ಗಂಟೆಗೆ ಸರಳ ಹಾಗೂ ಸಂಕ್ಷಿಪ್ತವಾಗಿ ಆಚರಣೆ ಮಾಡಲಾಗುವುದು. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಯಂತಿಗಳನ್ನು ಯಶಸ್ವಿಗೊಳಿಸಬೇಕು ಎಂದು ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್ ಪ್ರಕಾಶ ನಾಶಿ ಹೇಳಿದರು.
ತಾಲೂಕು ಆಡಳಿತಸೌಧದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ವಿವಿಧ ಜಯಂತಿಗಳ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಂದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಆ ಮೂಲಕ ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸಿದಂತಾಗುತ್ತದೆ. ಮಹಾನ ಪುರುಷರ ಭಾವಚಿತ್ರಗಳಿಗೆ ಪುಷ್ಪಾರ್ಪಣೆ ಮಾಡಿ, ಪೂಜೆ ಸಲ್ಲಿಸಲಾಗುತ್ತದೆ. ಉಪನ್ಯಾಸಕರಿಂದ ಉಪನ್ಯಾಸ ಏರ್ಪಡಿಸಲಾಗುತ್ತದೆ ಎಂದರು.
ಪೂರ್ವಭಾವಿ ಸಭೆಯಲ್ಲಿ ಸಮಾಜದ ಮುಖಂಡರಾದ ಮಹಾರುದ್ರಪ್ಪ ಪಡೆಸೂರ, ಗುರುರಾಜ ನಾಗರಳ್ಳಿ, ಪಂಚಾಕ್ಷರಿ, ಸಂಜೀವ ಧುಮಕನಾಳ, ವಿಶ್ವನಾಥ ಪೂಜಾರಿ, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.