ವಿವಿಧ ಪರೀಕ್ಷೆ ಕೇಂದ್ರಗಳಿಗೆ ಸಿಇಓ ಬೇಟಿ, ಪರಿಶೀಲನೆ

ರಾಯಚೂರು,ಏ.೬- ರಾಯಚೂರು ಜಿಲ್ಲೆಯ ಸಿರವಾರ ತಾಲೂಕು ಮತ್ತು ಕವಿತಾಳ ಪಟ್ಟಣದಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿಧರ ಕುರೇರ ಅವರು ಭೇಟಿ ನೀಡಿ ಪರಿಶೀಲಿಸಿದರು.
ಮೊದಲಿಗೆ ಸಿರವಾರ ತಾಲೂಕಿನ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಬಾಲಕರ ಸರ್ಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆಗಳು ಶಾಂತಿಯುತವಾಗಿ ನಡೆಯುತ್ತಿರುವ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಿಂದ ಮಾಹಿತಿ ಪಡೆದುಕೊಂಡರು. ನಂತರ ಕವಿತಾಳ ಪಟ್ಟಣದ ನವಚೇತನಾ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸಿರವಾರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಉಮೇಶ ಸರ್, ಶಾಲೆಯ ಮುಖ್ಯೋಪಾಧ್ಯಾಯರು ಇದ್ದರು.