ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಜ.30:- ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟ ಸಂಘಟನೆಗಳು ರಾಜ್ಯಾದ್ಯಂತ ರೈಲ್ ಬಂದ್ ಚಳವಳಿಯನ್ನು ರೈಲು ನಿಲ್ದಾಣಗಳಲ್ಲಿ ಹಮ್ಮಿಕೊಂಡಿದ್ದು, ಮೈಸೂರಿನಲ್ಲಿಯೂ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಮಾತನಾಡಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅರೇ ಹುಚ್ಚರು. ಗಡಿಕುರಿತು ಇವರು ಮಾತನಾಡುವ ಎಲ್ಲಾ ಮಾತನ್ನು ಸಾರಾಸಗಟಾಗಿ ತಿರಸ್ಕರಿಸುತ್ತೇವೆ. ಸೊಲ್ಲಾಪುರ ಬಾಂಬೆ ನಮಗೆ ಸೇರಬೇಕು. ಮಹಾರಾಷ್ಟ್ರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕು. ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧ ಮಾಡಬೇಕು. ಮರಾಠ ಪ್ರಾಧಿಕಾರವನ್ನು ರದ್ದು ಮಾಡಬೇಕು. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರಾಜೀನಾಮೆ ನೀಡಬೇಕು. ಹಿಂದಿ ಭಾಷೆಯನ್ನು ಸಂಪೂರ್ಣವಾಗಿ ವಿರೋಧಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.