ವಿವಿಧ ಬೇಡಿಕೆಗೆ ಒತ್ತಾಯಿಸಿ ಹಾಸ್ಟೇಲ್ ಗುತ್ತಿಗೆ ನೌಕರರ ಧರಣಿ

ಕಲಬುರಗಿ,ನ.9- ಸರ್ಕಾರಿ ಹಾಸ್ಟೇಲ ಮತ್ತು ವಸತಿ ಶಾಲೆಗಳ ಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆ ಮಾಡಬೇಕು ಹಾಗೂ ಕೋವಿಡ್-19 ರಜೆ ವೇತನ ನೀಡಬೇಕು ಎಂಬ ಪ್ರಮುಖ ಬೇಡಿಕೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ ಕೈಗೊಳ್ಳಲಾಯಿತು.
ನಗರದ ಜಿಲ್ಲಾ ಪಂಚಾಯತ ಕಚೇರಿ ಎದುರು ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೇಲ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವಲ್ಲಿಂದು ಧರಣಿ ಸತ್ಯಾಗ್ರಹ ಕೈಗೊಂಡ ನೌಕರರು, 10 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ನೌಕರರನ್ನು ಕ್ಷೇಮಾಭಿವೃದ್ಧಿ ಯೋಜನೆಯಡಿ ಸೇರ್ಪಡೆ ಮಾಡಿ ಅವರ ಸೇವೆಯನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು.
ವಸತಿ ಶಾಲೆಗಳ ನೇರ ನೇಮಕಾತಿಯಿಂದಾಗಿ ಕೆಲಸ ಕಳೆದುಕೊಂಡ ಹೊರಗುತ್ತಿಗೆ ನೌಕರರನ್ನು ಹೊಸದಾಗಿ ಪ್ರಾರಂಭವಾಗಿರುವ ವಸತಿ ಶಾಲೆಗಳಿಗೆ ನಿಯೋಜಿಸಬೇಕು ಎಂಬ ಪ್ರಮುಖ ಬೇಡಿಕೆಯ ಮನವಿ ಪತ್ರವನ್ನು ಜಿ.ಪಂ ಮುಖ್ಯ ಕಾರ್ಯನಿರ್ವಕ ಅಧಿಕಾರಿಗಳಿಗೆ ಸಲ್ಲಿಸಿದರು,
ಧರಣಿ ಸತ್ಯಾಗ್ರಹದಲ್ಲಿ ಭೀಮಶೆಟ್ಟಿ ಯಂಪಳ್ಳಿ, ಸುರೇಶ ದೊಡ್ಮನಿ, ರವಿ, ಫಾತಿಮಾಬೇಗಂ, ಮಾಪಣ್ಣಾ ಜಾನಕರ್, ಸರೋಜಾ ನಿಡಗುಂದಾ, ಪರಶುರಾವ ಹಡಗಿಲ, ಶಶಿಕಲಾ ಮದರ್ಕಿ, ನರಸಮ್ಮ ಚಂದನಕೇರಾ ನಾಗರಾಜ ಕಟ್ಟಿಮನಿ ಸೇರಿದಂತೆ ಹಲವರು ಭಾಗವಹಿಸಿದ್ದರು.