ರಾಯಚೂರು, ಜೂ.೧೪- ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನ ಖಂಡಿಸಿ ಮತ್ತು ಮೂಲಭೂತ ಸೌಕರ್ಯಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಕುರ್ಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕುರ್ಡಿ, ಗೋರ್ಕಲ್, ರಾಜಲಬಂಡ, ಸುಂಕೇಶ್ವರ, ಸಾದಾಪುರು ಹಳ್ಳಿಗಳ ಜನರ ಬೇಡಿಕೆಗಳಿಗಾಗಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಕಿವಿಗೊಡದ ವ್ಯವಸ್ಥೆ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕುರ್ಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಜಲ ಜೀವನ ಮಿಷನ್ ಅಡಿಯಲ್ಲಿ ಕೈಗೊಂಡ ಕಾಮಗಾರಿಯು ಅಪೂರ್ಣವಾಗಿದ್ದು, ಕಳಪೆ ಮಟ್ಟದ ಸಾಮಾಗ್ರಿಗಳನ್ನು ಬಳಸಿ ಕೆಲಸ ನಿರ್ವಹಿಸಿದ್ದು ಇದರಲ್ಲಿ ಶಾಮಿಲಾದ ಅಧಿಕಾರಿಗಳನ್ನು ವಜಾಗೊಳಿಸಬೇಕು.
ಕುರ್ಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ್ ಸಾದುದೂರು, ಸುಂಕೇಶ್ವರ, ಗೋರ್ಗಲ್, ಕುರ್ಡಿ, ಅರೋಲಿಯಲ್ಲಿ ನಡೆದಿದೆ ಎನ್ನಲಾದ ೧೫ನೇ ಹಣಕಾಸಿನ ದುರುಪಯೋಗದ ಬಗ್ಗೆ ತನಿಖೆ ನಡೆಸಿ ಗಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೇಲೆ ಸೂಕ್ತ ಕಾನೂನಿನ ಕ್ರಮ ಜರುಗಿಸಬೇಕು. ಪ್ರತಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಳ್ಳಿಗಳಲ್ಲಿ ಬರುವ ಎಸ್.ಸಿ., ಎಸ್.ಟಿ, ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಪಠ್ಯ ಪುಸ್ತಕ ಪೂರೈಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಬೇಕು.
ಸಮಾಜ ಕಲ್ಯಾಣ ಇಲಾಖೆಯಡಿ ವಸತಿ ನಿಲಯಕ್ಕಾಗಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಆಯ್ಕೆಮಾಡಿಕೊಳ್ಳಬೇಕು.
ಈ ಸಂದರ್ಭದಲ್ಲಿ ಉದಯಕುಮಾರ ಆರೋಲಿ, ಹನುಮಂತ ಆರೋಲಿ ಸೇರಿದಂತೆ ಉಪಸ್ಥಿತರಿದ್ದರು.