ವಿವಿಧ ಬೇಡಿಕೆ ಈಡೇರಿಕೆಗೆ ರೈತ ಸಂಘ ಪ್ರತಿಭಟನೆ

ರಾಯಚೂರು, ಜು.೩೧- ಕನಿಷ್ಟ ಬೆಂಬಲ ಬೆಲೆ ಖಾತ್ರಿ ಎಂ.ಎಸ್.ಪಿ. ಕಾನೂನು ಜಾರಿಗೆ ಆಗ್ರಹಿಸಿ ಸಂಯುಕ್ತ ಹೋರಾಟ ಸಮಿತಿ ಮುಖಂಡರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ರೈತ ವಿರೋಧಿ ಕೃಷಿ ಮಸೂದೆಗಳ ವಾಪಸ್ ಪಡೆಯಲು ಲಖಿಂಪುರ ಕೇರಿಯಲ್ಲಿ ಹುತಾತ್ಮರಾದ ರೈತರಿಗೆ ಪರಿಹಾರ ನೀಡಲು ಹಾಗೂ ರೈತರ ಮೇಲೆ ಹಾಕಿರುವ ಮೊಕದ್ದಮೆಯನ್ನು ವಾಪಸ್ ಪಡೆಯಬೇಕು.
ರೈತ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಕಾಯ್ದೆ ಎಂ.ಎಸ್.ಪಿ. ಜಾರಿಗೊಳಿಸಬೇಕು.ದೆಹೆಲಿ ಹೋರಾಟ ನಿರತ ರೈತರ ಮೇಲೆ ಸುಳ್ಳು ಕೇಸ್ ಹಾಕಿರುವುದನ್ನು ವಾಪಸ್ ೫೧ ಪಡೆಯಬೇಕು.ಲಖಿಂಪೂರ ಕೇರಿಯಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು.ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಕೃಷಿ ಕಾಯ್ದೆಗಳು , ಜಾನುವಾರು ಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ರೈತವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಲಖಿಂಪೂರ ಕೇರಿಯ ರೈತರ ಕೊಲೆಗೆ ಕಾರಣಾಗಿರುವ ಕೇಂದ್ರ ಸಚಿವ ಶ್ರೀ ಅಜಯ್ ಅವರನ್ನು ಮಂತ್ರಿ ಪದವಿಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಚಾಮರಸ ಮಾಲಿಪಾಟಲ್,
ಕೆಜಿ ವೀರೇಶ್ ಜಿಂಡಪ್ಪ, ಖಾಜಾ ಅಸ್ಲಾಂ ಪಾಷ ಸೇರಿದಂತೆ ಇತರರು ಉಪಸ್ಥಿತರಿದ್ದರು.