ವಿವಿಧ ಮಠಾಧೀಶರ ಆಶೀರ್ವಾದ ಪಡೆದ ಅಭ್ಯರ್ಥಿ ಲೋಕಿಕೆರೆ ನಾಗರಾಜ್ 

ದಾವಣಗೆರೆ. ಏ.೨೨; ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಅವರು ಜಿಲ್ಲೆಯ ವಿವಿಧ ಮಠಗಳಿಗೆ ಭೇಟಿ ನೀಡಿ ಮಠಾಧೀಶರ ಆಶೀರ್ವಾದ ಪಡೆದರು. ಹರಿಹರದ ಪಂಚಮಸಾಲಿ ಮಠದ ಶ್ರೀ ವಚನಾನಂದ ಸ್ವಾಮೀಜಿ,ಬೆಳ್ಳೂಡಿ ಮಠದ ನಿರಂಜನಾನಂದ ಶ್ರೀ,ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಶ್ರೀ ಹಾಗೂ ಸರ್ದಾರ್‌ ಸೇವಾಲಾಲ್ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ‌ಪಡೆದರು.ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.