ವಿವಿಧ ರಸ್ತೆಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ

ರಾಯಚೂರು.ಮೇ.೨೦-ಕೋವಿಡ್ ೧೯ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದು ನಗರದಲ್ಲಿ ನಗರಸಭೆ ವತಿಯಿಂದ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಜಿಲ್ಲೆಯನ್ನು ೩ ದಿನಗಳ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು ಮುಂಜಾಗೃತಾ ಕ್ರಮವಾಗಿ ಇಂದು ನಗರದ ಗಾಂಧೀ ವೃತ್ತ ಸೇರಿದಂತೆ ವಿವಿಧ ವೃತ್ತಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು.
ನಗರಸಭೆ ಪೌರಾಯುಕ್ತ ವೆಂಕಟೇಶ್ ಅವರು ಮಾತನಾಡುತ್ತ ಕಳೆದ ೫ ದಿನಗಳಿಂದ ಜಿಲ್ಲೆಯಲ್ಲಿ ಕೊರೊನ ಎರಡನೇ ಅಲೆ ತಡೆಯಲು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಗರ ಸಭೆ ಮತ್ತು ಅಗ್ನಿಶಾಮಕ ದಳದ ವತಿಯಿಂದ ನಗರದ ವಿವಿಧ ರಸ್ತೆಗಳಲ್ಲಿ ಸೋಡಿಯಂ ಕ್ಲೋ ಹೈಪೋ ಕ್ಲೋರೇಡ್ ಬಳಸಿ ಸ್ಯಾನಿಟೈಸರ್ ಮಾಡಲಾಗುತ್ತಿದ್ದು ಅದೇ ರೀತಿ ಅನೇಕ ಬಡಾವಣೆಗಳು ಸಹ ಸ್ಯಾನಿಟೈಸರ್ ಮಾಡಲಾಗಿದ್ದು ಇದರಿಂದ ಕೊರೊನ ತಡೆಗಟ್ಟಲು ಸಾಧ್ಯವಾಗಿದೆ ಎಂದು ಹೇಳಿದರು.