ವಿವಿಧ ಶರಣರ ಮನವಿ ಮೇರೆಗೆ ಸರ್ಕಾರವು ವಿಶ್ವಗುರು ಬಸವಣ್ಣನವರನ್ನುಸಾಂಸ್ಕøತಿಕ ನಾಯಕ ಎಂದು ಘೋಷಣೆ :ಸಚಿವ ಈಶ್ವರ ಬಿ.ಖಂಡ್ರೆ

ಬೀದರ: ಫೆ. 18: ಬಸವಾದಿ ಶರಣರು ವಿವಿಧ ಸಂಘ ಸಂಸ್ಥೆಗಳು, ಮಠಾಧೀಶರು, ಬಸವತತ್ವ ಅನುಯಾಯಿಗಳು ಮನವಿ ಮೇರೆಗೆ ಸರ್ಕಾರವು ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಲಾಗಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.
ಅವರು ಶನಿವಾರ ನಗರದ ಡಾ.ಚನ್ನಬಸವಣ ಪಟ್ಟದೇವರು ರಂಗಮಂದಿರದಲ್ಲಿ ನಡೆದ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
12ನೇ ಶತಮಾನದಲ್ಲಿ ಕ್ರಾಂತಿಯೋಗಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿರಹಿತ ಸಮಾಜ ನಿರ್ಮಾಣ, ಕಾಯಕದ ಮಹತ್ವ ಮತ್ತು ವರ್ಗ ರಹಿತ ಸಮಾಜ, ಜೀವನ ಮಾರ್ಗ ಸರ್ವಕಾಲಕ್ಕೂ ದಾರಿದೀಪವಾಗಿದೆ. ಕಲ್ಯಾಣ ಕ್ರಾಂತಿ ಮೂಲಕ ಸರ್ವರ ಸಮಾನತೆ ಅಸ್ಪೃಶತೆ ಹೋಗಲಾಡಿಸಲು ಬಸವಣ್ಣನವರು ವೈಚಾರಿಕ ತಳಹದಿ ಮೇಲೆ ಸುಂದರ ಸಮಾಜ ನಿರ್ಮಾಣ ಮಾಡಲು ಭದ್ರ ಬುನಾದಿ ಹಾಕಿದವರು ಎಂದು ಹೇಳಿದರು.
ವೈಯಕ್ತಿಕ ಸ್ವತಂತ್ರ ಸಮಾನತೆ, ದಾಸೋಹ, ಸಹಬಾಳ್ವೆ, ವರ್ಗ ರಹಿತ ಸಮಾಜ, ವರ್ಣರಹಿತ ಸಮಾಜ, ಮಾನವಿಯ ಮೌಲ್ಯಗಳನ್ನು ಎತ್ತಿ ಹಿಡಿದು ವಚನ ಸಾಹಿತ್ಯದ ಮೂಲಕ ಸರ್ವರಿಗೂ ಸಮಪಾಲು ಸರ್ವರಿಗೂ ಸಹಬಾಳು ಎನ್ನುವ ಮೂಲಕ ಸಮಭಾವದ ತಾತ್ವಕತೆಗಳ ಮೂಲಕ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಗಳನ್ನು ಬೋಧಿಸುತ್ತಾ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು, ಸಾಂಸ್ಕೃತಿಕ ರಾಯಬಾರಿತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿರುವ ಮೇರೆಗೆ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗಿದೆ ಎಂದರು.
ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಿದ ಕೂಡಲ ಸಂಗಮದ ಬಸವಧರ್ಮ ಪೀಠದ ಪೂಜ್ಯ ಡಾ.ಗಂಗಾದೇವಿ ಅವರು ಮಾತನಾಡಿ, ವಿಶ್ವಗುರು ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆಯೋಣ ಎಂದು ಹೇಳಿದರು.
ಪೌರಾಡಳಿತ ಹಾಗು ಹಜ್ ಸಚಿವರಾದ ರಹಿಮಖಾನ ಅವರು ಮಾತನಾಡಿ, ಬಸವಣ್ಣನವರು ಒಂದೇ ಜಾತಿಗೆ ಸಿಮಿತವಲ್ಲ ಅವರ ವಚನ ಸಾಹಿತ್ಯದ ಮೂಲಕ ಸಮ ಸಮಾಜ ನಿರ್ಮಿಸಲು ಪ್ರಾಮಾಣಿಕವಾಗಿ ದುಡಿದ ಮಹಾನ ನಾಯಕರು ಬಸವಣ್ಣನವರ ತತ್ವ ಸಿದ್ದಾಂತಗಳನ್ನು, ವಿಚಾರದಾರೆಗಳನ್ನು ನಮ್ಮ ಜೀವನದಲ್ಲಿ ಪ್ರತಿಯೊಬ್ಬರು ಅಳವಡಿಸಿಕೊಂಡರೆ ಮುಂದೆ ಕೋಮು ಗಲಭೆಗಳು ನಡೆಯುವುದಿಲ್ಲ ಎಂದು ಹೇಳಿದರು.
ಕಾರ್ಯಕ್ರಮ ಮುನ್ನ ಬಸವಣ್ಣನವರ ಭಾವಚಿತ್ರದ ಮೆರವಣಿಗೆಯನ್ನು ಜಿಲ್ಲಾಧಿಕಾರಿಗಳ ಬಸವೇಶ್ವರ ವೃತ್ತದಿಂದ ಪ್ರಾರಂಭವಾಗಿ ಭಗತಸಿಂಗ ವೃತ್ತ, ಅಂಬೇಡ್ಕರ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತ, ಕನ್ನಡಾಂಬೆ ವೃತ್ತದ ಮೂಲಕ ರಂಗಮಂದಿದವರೆಗೆ ತಲುಪಿತು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಎಂ.ಡಿ.ಗೌಸ್, ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗೀರಿಶ ದೀಲಿಪ ಬದೋಲೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಾದ ಚನ್ನಬಸವಣ್ಣ ಲಂಗೋಟಿ, ಬಸವಸೇವಾ ಪ್ರತಿಷ್ಠಾನ ಬೀದರನ ಡಾ.ಗಂಗಾದೇವಿ, ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು, ಜಿಲ್ಲಾ ಬಸವ ದಳದ ಅಧ್ಯಕ್ಷರು, ಸಮಾಜದ ಮುಖಂಡರು, ಹಿರಿಯರು, ಬಸವ ಅನುಯಾಯಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.