ವಿವಿ ಖಾಲಿಹುದ್ದೆ ಭರ್ತಿ : ಡಿಸಿಎಂ

ಬೆಂಗಳೂರು, ಮಾ.೧೫- ರಾಜ್ಯದಲ್ಲಿ ಕೋವಿಡ್ ಸೋಂಕು ಇರುವ ಹಿನ್ನೆಲೆಯಲ್ಲಿ ಯಾವುದೇ ನೇಮಕಾತಿ ಮಾಡಿಕೊಳ್ಳಬಾರದು ಎನ್ನುವ ಸರ್ಕಾರದ ಸುತ್ತೋಲೆ ಇದೆ.
ಇದನ್ನು ಆದಷ್ಟು ಬೇಗ ತೆರವುಗೊಳಿಸಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್‌ನಾರಾಯಣ ವಿಧಾನಪರಿಷತ್‌ನಲ್ಲಿಂದು ಹೇಳಿದರು.
ವಿಶ್ವವಿದ್ಯಾಲಯಗಳುಸೇರಿದಂತೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಹುದ್ದೆಗಳಿದ್ದು, ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಶ್ನೋತ್ತರ ಅವಧಿಯಲ್ಲಿ ಚಂದ್ರಶೇಖರಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿಗಳು, ಹೈದರಾಬಾದ್-ಕರ್ನಾಟಕದಲ್ಲಿ ಹುದ್ದೆಗಳು ಭರ್ತಿಯಾಗದೆ ಖಾಲಿ ಇವೆ. ಅವುಗಳ ಭರ್ತಿಗೆ ಪೂರಕವಾದ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಹೊಸ ನೇಮಕಾತಿಗಳನ್ನು ಮಾಡಿಕೊಳ್ಳಬಾರದು ಎನ್ನುವ ನಿಯಮ ಸುತ್ತೋಲೆ ಇದೆ. ಅದನ್ನು ಶೀಘ್ರ ತೆರವುಗೊಳಿಸಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.