ವಿವೇಕಾನಂದರು ತತ್ವಜ್ಞಾನಿಗಳಾಗಿದ್ದರು: ಶ್ರೀ ವಿಜಯಾನಂದ ಸರಸ್ವತಿ

ಧಾರವಾಡ ಜ.13: ಸ್ವಾಮಿ ವಿವೇಕಾನಂದರು ಭಾರತದ ಅತ್ಯಂತ ಪ್ರಸಿದ್ಧ, ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12 ರಂದು ರಾಷ್ಟ್ರೀಯ “ಯುವದಿನ”ವೆಂದು ಆಚರಿಸಲಾಗುತ್ತದೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ಸ್ವಾಮಿ ವಿಜಯಾನಂದ ಸರಸ್ವತಿ ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಆಯೋಜಿಸಿದ ಸ್ವಾಮಿ ವಿವೇಕಾನಂದರ 158 ನೆ ಜನ್ಮ ದಿನಾಚರಣೆಯ ಕಾಯ9ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇ0ದಿನ ಶುಭದಿನವು ವಿವೇಕಾನಂದರ ತತ್ವಗಳು ಅವರ ವ್ಯಕ್ತಿತ್ವ ಹಾಗೂ ಚಿಂತನೆಗಳು ಪುಸ್ತಕಗಳು ಜ್ಞಾನವನ್ನು ವೃದ್ಧಿಸಿಕೊಳ್ಳಲು ಸಹಾಯಕವಾಗಿದೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪೆÇ್ರ ಎಸ್ ಬಿ ಪಾಟೀಲ್ ಹೇಳಿದರು. ಕಾರ್ಯಕ್ರಮದಲ್ಲಿ ಸ್ವಾಮಿ ಜಗದೀಪಾನ0ದರು, ಸಾಂಸ್ಕೃತಿಕ ವಿಭಾಗದ ಸಂಚಾಲಕರಾದ ಡಾ ವಿಜಯಕುಮಾರಿ ಚಿಲಕವಾಡ, ಲಕ್ಷ್ಮಣ ಉಪ್ಪಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪೆÇ್ರ ಬಿ. ಎಸ್. ಪಾಟೀಲ ವಂದಿಸಿದರು.