ವಿವೇಕಾನಂದರ 157ನೇ ಜಯಂತಿ ಆಚರಣೆ

ಮೈಸೂರು:ಜ:12: ಭಾರತೀಯ ಧಾರ್ಮಿಕ ಪರಂಪರೆ ಸಾಕ್ಷಿಪ್ರಜ್ಞೆಯಂತಿದ್ದ ಸ್ವಾಮಿ ವಿವೇಕಾನಂದರ ಆದರ್ಶ ಯುವಜನತೆಗೆ ತಲುಪಿಸಿದರೆ ರಾಷ್ಟ್ರಪ್ರಜ್ಞೆ ಬೆಳಗಲಿದೆ ಎಂದು ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ತಿಳಿಸಿದರು.
ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ವಸ್ತು ಪ್ರದರ್ಶನ ಆವರಣದಲ್ಲಿ ನಡೆದ ಸ್ವಾಮಿ ವಿವೇಕಾನಂದರ 157ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ, ವೀರಸನ್ಯಾಸಿ ವಿವೇಕಾನಂದ ಕಡಲಿನಾಚೆ ದೇಶಗಳಿಗೆ ತೆರಳಿ ಸನಾತನ ಧಾರ್ಮಿಕ ಭಾರತೀಯತೆಯನ್ನು ಪರಿಚಯಿಸಿದರು. ಯುವಜನರ ಹೃದಯ ಮಂದಿರದಲ್ಲಿ ಶೌರ್ಯ ಧೈರ್ಯದ ಪರಿಕಲ್ಪನೆ ತುಂಬಲು ದೇಶದಾದ್ಯಂತ ಸಂಚರಿಸಿದರು. ಆಧ್ಯಾತ್ಮಿಕ ಸಂತ ಶ್ರೀರಾಮಕೃಷ್ಣ ಪರಮಹಂಸರು ಮತ್ತು ಶಾರದಾ ಮಾತೆಯರ ಪದತಲದಲ್ಲಿ ದಕ್ಷಿಣೇಶ್ವರದಲ್ಲಿ ಬೆಳೆದರು. ಯುವಜನತೆಗೆ ವಿವೇಕಾನಂದರ ಜೀವನದ ಮಹತ್ವತಿಳಿಸಿಕೊಡುವ ಕೆಲಸ ಮಾಡಬೇಕಿದೆ ಎಂದರು.
ಮೈಮುಲ್ ನಿರ್ದೇಶಕರಾದ ಅಶೋಕ್ ಮಾತನಾಡಿ, ವಿಶ್ವದ ಎಲ್ಲ ಧರ್ಮಗಳಿಗೂ ಹಿಂದೂ ಧರ್ಮವೇ ಆಧಾರಸ್ತಂಭ. ಅಧ್ಯಾತ್ಮ, ಸಾಮರಸ್ಯ ಮತ್ತು ಸಮೃದ್ಧ ಸಂಸ್ಕೃತಿಯ ತವರೂರು ಭಾರತ ಎಂದು ತಿಳಿಸಿಕೊಟ್ಟವರು ಸ್ವಾಮಿ ವಿವೇಕಾನಂದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮೈಮುಲ್ ನಿರ್ದೇಶಕರಾದ ಅಶೋಕ್, ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್ ಆರ್ ಮಹಾದೇವಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಲಕ್ಷ್ಮಿದೇವಿ, ಜಿಲ್ಲಾ ಪಂಚಾಯತ್ ಸದಸ್ಯ ಗುರುಸ್ವಾಮಿ, ಯುವ ಮುಖಂಡರಾದ ವಿಕ್ರಮ ಅಯ್ಯಂಗಾರ್ ,ಮುಖಂಡರಾದ ಪಂಚಾಕ್ಷರಿ, ಉಮೇಶ್ ಕುಮಾರ್,ಮಹದೇವು , ಕುಮಾರ್, ಶ್ರೀನಿವಾಸ, ರವೀಂದ್ರ, ಲೋಹಿತ್ ಉಪಸ್ಥಿತರಿದ್ದರು.