
ರಾಯಚೂರು,ಮಾ.೧೪- ಭಾರತ ಸರ್ಕಾರದ ರಕ್ಷಣಾ ಸಚಿವಾಲಯದಿಂದ ೧೯೫೪ರಲ್ಲಿ ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಆರಂಭವಾಗಿ ದೇಶದ ರಕ್ಷಣೆಗಾಗಿ ಬೇಕಾಗುವ ಉಪಕರಣಗಳನ್ನು ಒದಗಿಸಿ ಈಗ ದೇಶ ಹೆಮ್ಮೆಯ ಸಂಸ್ಥೆಯಾಗಿ ಬೆಳೆಯುತ್ತಿದೆ ಎಂದು ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಮೋಹನ್ ಆರ್ ಪಿ ಅವರು ಹೇಳಿದರು.
ಅವರಿಂದು ನಗರದ
ಇದೀಗ ಸಿ.ಎಸ್.ಆರ್ ಕಾರ್ಯಕ್ರಮದಡಿ ವಿಶೇಷಚೇತನರಿಗೆ ಸಲಕರಣೆಗಳನ್ನು ನೀಡಲಾಗುತ್ತಿದೆ. ವಿಶೇಷಚೇತನರು ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಿ ಎಂದು ಭಾರತ ಎಲೆಕ್ಟಾನಿಕ್ಸ್ ಲಿಮಿಟೆಡ್ ಬೆಂಗಳೂರಿನ ವ್ಯವಸ್ಥಾಪಕ ಮೋಹನ್.ಆರ್.ಪಿ ಅವರು ಹೇಳಿದರು.
ಅವರಿಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಮಹತ್ವಾಕಾಂಕ್ಷೆ ಜಿಲ್ಲೆ ಕಾರ್ಯಕ್ರಮದ ಭಾಗವಾಗಿ ಭಾರತ
ಎಲೆಕ್ಟ್ರಾನಿಕ್ ಆಶ್ರಯದಲ್ಲಿ ಸಿಎಸ್‌ಆರ್ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ದಿವ್ಯಾಂಗ ವ್ಯಕ್ತಿಗಳಿಗೆ ಉಚಿತ ಸಹಾಯ ಮತ್ತು ಸಲಕರಣೆಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಹತ್ವಾಕಾಂಕ್ಷೆ ಜಿಲ್ಲೆಯಲ್ಲಿನ ಆರೋಗ್ಯ, ಶಿಕ್ಷಣ, ಪೋಷಣೆ ಮತ್ತು ಕೌಶಲ್ಯಾಭಿವೃದ್ಧೀ ಸೇರಿದಂತೆ ಇನ್ನಿತರ ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಕಾರ್ಯನಿರ್ವಹಿಸಲು ಮುಂದಾಗಿದ್ದು, ಇದೀಗ ವಿಕಲಚೇತನರಿಗೆ ಸಲಕರಣೆಗಳನ್ನು ಒದಗಿಸುತ್ತಿದೆ. ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಕಾರ್ಯಕ್ರಮದಡಿಯಲ್ಲಿ ಈ ದಿವ್ಯಾಂಗ ವ್ಯಕ್ತಿಗಳಿಗೆ ಸಲಕರಣೆಗಳನ್ನು ನೀಡಲಾಗುತ್ತಿದ್ದು, ಸರ್ಕಾರದಿಂದ ಇದೇ ರೀತಿಯ ಸಹಕಾರ ಸಿಗಬೇಕಾಗಿದೆ ಎಂದರು.
ಇದೇ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಸರ್ಕಾರದ ಸವಲತ್ತುಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟಿಸುವುದು ಸರ್ಕಾರದ ಮುಖ್ಯ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಸಿಎಸ್‌ಆರ್ ಕಾರ್ಯಕ್ರಮದಡಿ ಹಮ್ಮಿಕೊಂಡಿರುವ ದಿವ್ಯಾಂಗ ವ್ಯಕ್ತಿಗಳಿಗೆ ಸಲಕರಣೆಗಳ ವಿತರಣೆ ಕಾರ್ಯಕ್ರಮವು ಒಂದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ೧೯,೧೦೦ ವಿಶೇಷ ಚೇತನರಿದ್ದು, ಅರ್ಹ ಮತದಾರರು ತಮ್ಮ ಹಕ್ಕಾದ ಮತದಾನವನ್ನು ಮಾಡಲು ಮುಂದಾಗಬೇಕು. ವಿಶೇಷಚೇತನರ ಕೊರತೆಗಾನುಸಾರವಾಗಿ ಮತದಾನ ಮಾಡಲು ಅನುಕೂಲ ಮಾಡಿಕೊಡುವುದು ಸರ್ಕಾರದ ಜವಾಬ್ದಾರಿಯೂ ಆಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಮಾತನಾಡಿ, ಮಹತ್ವಾಕಾಂಕ್ಷೆ ಜಿಲ್ಲೆಗಳನ್ನು ಆಯ್ಕೆ ಮಾಡಿಕೊಂಡು ಆ ಜಿಲ್ಲೆಗಳಲ್ಲಿರುವ ಆರೋಗ್ಯ, ಶಿಕ್ಷಣ, ಪೋಷಕಾಂಶದ ಕೊರತೆ ಸೇರಿದಂತೆ ಇನ್ನಿತರ ಕೊರತೆಗಳ ಬಗ್ಗೆ ಬಿ.ಇ.ಎಲ್ ಜೊತೆ ಚರ್ಚಿಸಿದಾಗ ಅದಕ್ಕೆ ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸರ್ಕಾರದೊಂದಿಗೆ ಸ್ಪಂಧಿಸಿ ಕಾರ್ಯ ನಿರ್ವಹಿಸುತ್ತಿರುವುದು ಅತ್ಯಂತ ಸಂತಸದ ವಿಚಾರವಾಗಿದೆ ಇದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಕಾರ್ಯಕ್ರಮಗಳಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಅಪರ್ಣಾ, ಬಿ.ಇ.ಎಲ್ ವ್ಯವಸ್ಥಾಪಕರಾದ ಶಿವಕುಮಾರ, ಡಾ.ಶಶಿಭೂಷಣ, ರವಿಕಾಂತ ನಾಯಕ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ಮಹತ್ವಾಕಾಂಕ್ಷೆ ಜಿಲ್ಲೆ ಕಾರ್ಯಕ್ರಮಾಧಿಕಾರಿ ಮಹ್ಮದ್ ಯೂಸೂಫ್ ಅಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.