ವಿಶೇಷ ಉಪನ್ಯಾಸ ಹಾಗೂ ಸಂವಾದ

ಕಲಬುರಗಿ:ಡಿ.11:ದೇಹ, ಮನಸ್ಸು ಮತ್ತು ಆರೋಗ್ಯದ ಅರಿವಿನ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರುಣೇಶ್ವರ ನಗರದ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯಲ್ಲಿ ಡಿಸೆಂಬರ್ 12ರಂದು ಮಧ್ಯಾಹ್ನ 1 ಗಂಟೆಗೆ ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

ಸಿ.ಆರ್.ಸಿ. ಸ್ನೇಹ ಬಳಗ, ಬೆಂಗಳೂರು ಹಾಗೂ ವಿವೇಕಾನಂದ ವಿದ್ಯಾನಿಕೇತನ ಶಾಲೆ ಸಹಯೋಗದ ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ‘ಸಮಾಧಾನ’ ಕೇಂದ್ರದ ಹಿರಿಯ ಆಪ್ತ ಸಮಾಲೋಚಕರಾದ ಶ್ರೀ ಎ.ಎಸ್.ರಾಮಚಂದ್ರ ಅವರು ಉಪನ್ಯಾಸ ನೀಡಿದ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.