ವಿಶೇಷ ಚೇತನರಿಂದ ತ್ರಿಚಕ್ರ ವಾಹನಗಳ ಮೂಲಕ ಮತದಾನ ಜಾಗೃತಿ

ಸಂಜೆವಾಣಿ ವಾರ್ತೆ,
ವಿಜಯಪುರ,ಏ.24:ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮತ್ತು ತಾಲ್ಲೂಕಾ ಆಡಳಿತ ಇವರ ಸಹಯೋಗದಲ್ಲಿ ವಿಶೇಷಚೇತನರ ಇಂಧನ ಚಾಲಿತ ತ್ರಿಚಕ್ರವಾಹನಗಳ ಮೂಲಕ ನಗರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರವನ್ನು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ರಿಷಿ ಆನಂದ ಅವರು ಹಸಿರು ನಿಶಾನೆ ತೋರಿಸುವದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೇ 7ರಂದು ಕುಟುಂಬ ಸಮೇತವಾಗಿ ಮತಗಟ್ಟೆಗೆ ತೆರಳಿ ಮತದಾನ ಮಾಡುವದರ ಮೂಲಕ ದೇಶ ಕಟ್ಟುವದು ಅವಶ್ಯವಿದೆ. ಮತಗಟ್ಟೆಗಳಲ್ಲಿ ವಿಶೇಷ ಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ವಿಕಲಚೇತನರಿಗೆ, ಹಿರಿಯ ನಾಗರಿಕರಿಗೆ ಸರದಿಯಲ್ಲಿ ನಿಲ್ಲಿಸದೆ ನೇರವಾಗಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಕಾರಣ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಜಿಲ್ಲೆಯಾದ್ಯಂತ ವಿವಿಧ ರೀತಿಯ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನೀವು ನಿಮ್ಮ ಮತದಾನದೊಂದಿಗೆ ನೆರೆ ಹೊರೆಯವರಿಗೂ ಮತದಾನದ ಜಾಗೃತಿ ಮೂಡಿಸಿದಾಗ ಮಾತ್ರ ಮತದಾನ ಪ್ರಕ್ರಿಯೆ ಸಾರ್ಥಕ ವಾಗುತ್ತದೆ ಎಂದು ಹೇಳಿದರು. ಸುಮಾರು 100 ಇಂಧನ ಚಾಲಿತ ತ್ರಿಚಕ್ರ ವಾಹನ 200 ಕ್ಕಿಂತ ಹೆಚ್ಚು ವಿಕಲಚೇತನರು ಹಾಗೂ ಟ್ಯಾಬ್ಲೂ ವಾಹನದ ಜೊತೆಗೆ ಜಿಲ್ಲಾ ಆಸ್ಪತ್ರೆಯಿಂದ ಕಂದಗಲ್ ಹನುಮಂತರಾಯ ರಂಗ ಮಂದಿರದವರೆಗೆ ಜಾಥಾ ನಡೆಸಲಾಯಿತು. ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾ ಚುನಾವಣಾ ರಾಯಭಾರಿ ಕು. ಸಹನಾ ಕುಡಿಗನೂರ ಇವರು ಮತದಾನ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಅಶದ್ ಆರ್ ಷರಿಪ್, ಉಪ ಆಯುಕ್ತ ಮಹಾವೀರ ಬೋರಣ್ಣವರ, ಯೋಜನಾ ನಿರ್ದೇಶಕ ಎಸ್.ಆರ್. ಮುಂಡರಗಿ, , ಜಿಪಂ ಯೋಜನಾ ಸಾಖ್ಯಿಂಕ ಅಧಿಕಾರಿ ಎ.ಬಿ ಅಲ್ಲಾಪೂರ, ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಹೊಂಗಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ವರಿ ಗೋಲಗೇರಿ, ಡಾ. ಕವಿತಾ, ಡಾ. ಜೈಬುನ್ನಿಸಾ ಬೀಳಗಿ, ಡಾ. ಕೆ. ಗುಂಡಬಾವಡಿ, ಸಹಾಯಕ ಆಡಳಿತಾಧಿಕಾರಿ ಹೇಮಂತ ಕುಲಕರ್ಣಿ ಹಾಗೂ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಎಂ.ಆರ್.ಡಬ್ಲೂ, ವ್ಹಿ.ಆರ್.ಡಬ್ಲೂ ಹಾಗೂ ಯು.ಆರ್.ಡಬ್ಲೂಗಳು ಮತ್ತು ಜಿಲ್ಲೆಯ ಚುನಾವಣಾ ರಾಯಭಾರಿಗಳಾದ ಕು.ರಾಜೇಶ ಪವಾರ, ಸಾಕ್ಷಿ ಹಿರೇಮಠ ಭಾಗವಹಿಸಿದ್ದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ರಾಜಶೇಖರ ಧೈವಾಡಿ ನಿರೂಪಿಸಿ, ವಂದಿಸಿದರು.