ವಿಶೇಷ ಚೇತನ ಮಕ್ಕಳಿಂದ ಯೋಗಾಭ್ಯಾಸ

ಕಲಬುರಗಿ,ಜೂ.23-ವಿಶ್ವ ಯೋಗ ದಿನಾಚರಣೆ ಅಂಗವಾಗಿ ಇಂದುಮತಿ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮನಸ್ವಿನಿ ವಿಶೇಷ ಮಕ್ಕಳ ಶಾಲೆಯಲ್ಲಿ ಬುಧವಾರ ವಿಶೇಷ ಚೇತನ ಮಕ್ಕಳು ಯೋಗಾಭ್ಯಾಸ ಮಾಡುವ ಮೂಲಕ ಗಮನ ಸೆಳೆದರು.
ಸಂಸ್ಥೆಯ ಅಧ್ಯಕ್ಷ ರಮೇಶ ಹತ್ತಿ, ಪ್ರಾಂಶುಪಾಲರಾದ ಆಶಾ ನಿಪ್ಪಾಣಿ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.