ವಿಶೇಷ ರೈಲುಗಳಿಗೆ ಮೋದಿ ಚಾಲನೆ

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ದಲ್ಲಿ ದಕ್ಷಿಣ ಭಾರತದ ಮೊದಲ ‘ವಂದೇ ಭಾರತ್’ ರೈಲು ಮತ್ತು ಬೆಂಗಳೂರಿನಿಂದ ಕಾಶಿಗೆ ತೆರಳುವ ಭಾರತ್ ಗೌರವ್ ‘ಕಾಶಿ ದರ್ಶನ್’ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಜೊತೆಗಿದ್ದರು.